ಜಮ್ಮು: ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯ ದೂರದ ಹಳ್ಳಿಯೊಂದರಲ್ಲಿ ಮೇಘಸ್ಫೋಟದಿಂದ ಉಂಟಾದ ಪ್ರವಾಹದಿಂದಾಗಿ ಕನಿಷ್ಠ ನಾಲ್ವರು ಸಾವನ್ನಪ್ಪಿದ್ದಾರೆ ಮತ್ತು ಅನೇಕರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.
ಶನಿವಾರ ಮತ್ತು ಭಾನುವಾರದ ಮಧ್ಯರಾತ್ರಿಯಲ್ಲಿ ಮೇಘಸ್ಫೋಟವು ಜಾಂಗ್ಲೋಟ್‌ನ ಹಳ್ಳಿಯೊಂದಕ್ಕೆ ಅಪ್ಪಳಿಸಿತು.
ಜಮ್ಮು ಮತ್ತು ಕಾಶ್ಮೀರದ ಉಧಮ್‌ಪುರದ ಸಂಸದರಾಗಿರುವ ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಪ್ರತಿಕ್ರಿಯಿಸಿ, ಮೇಘಸ್ಫೋಟದಲ್ಲಿ ರೈಲ್ವೆ ಹಳಿ, ರಾಷ್ಟ್ರೀಯ ಹೆದ್ದಾರಿ-44 ಮತ್ತು ಪೊಲೀಸ್ ಠಾಣೆಗೂ ಹಾನಿಯಾಗಿದೆ.
ನಾಗರಿಕ ಆಡಳಿತ, ಮಿಲಿಟರಿ ಮತ್ತು ಅರೆಸೇನಾ ಪಡೆಗಳು ಕಾರ್ಯಾಚರಣೆಗೆ ಇಳಿದಿವೆ. ಪರಿಸ್ಥಿತಿಯನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡಲಾಗುತ್ತಿದೆ" ಎಂದು ಅವರು ಕಥುವಾದಲ್ಲಿ ಹಿರಿಯ ಪೊಲೀಸ್ ಅಧಿಕಾರಿಯೊಂದಿಗೆ ಮಾತನಾಡಿದ ನಂತರ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.