ವೇದಿಕೆ ಮೇಲೆಯೇ ಕಾಂಗ್ರೆಸ್ ಪಕ್ಷದ ಶಾಸಕರ ಎದೆಗೆ ಗುಂಡಿಟ್ಟು ಕೊಂದ ದುಷ್ಕರ್ಮಿಗಳು

ಸೋಮವಾರ, 11 ಫೆಬ್ರವರಿ 2019 (06:22 IST)
ಕೋಲ್ಕತ್ತಾ : ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ ಪಕ್ಷದ ಶಾಸಕ ಸತ್ಯಜಿತ್ ಬಿಸ್ವಾಸ್ ಅವರನ್ನು ಶನಿವಾರ ರಾತ್ರಿ ದುಷ್ಕರ್ಮಿಗಳು ಗುಂಡಿಟ್ಟು ಕೊಲೆಗೈದಿದ್ದಾರೆ.


ಶನಿವಾರ ರಾತ್ರಿ ಶಾಸಕರು ತಮ್ಮ ನಿವಾಸದ ಸಮೀಪದಲ್ಲಿ ಆಯೋಜಿಸಲಾಗಿದ್ದು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಆವೇಳೆ ಬೈಕ್ ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ವೇದಿಕೆಯಲ್ಲಿ ಆಸೀನರಾಗಿದ್ದ ಶಾಸಕ ಸತ್ಯಜಿತ್ ಬಿಸ್ವಾಸ್ ಅವರ ಎದೆಗೆ ಗುಂಡು ಹಾರಿಸಿದ್ದಾರೆ.


ತಕ್ಷಣ ಪಕ್ಷದ ಕಾರ್ಯಕರ್ತರು ಸತ್ಯಜಿತ್ ಅವರನ್ನು ಶಕ್ತಿನಗರದ ಆಸ್ಪತ್ರೆಗೆ ದಾಖಲಿಸಲು ತೆರಳುತ್ತಿದ್ದ ವೇಳೆ ಮಾರ್ಗ ಮಧ್ಯೆಯೇ ಶಾಸಕರು ಕೊನೆಯುಸಿರೆಳೆದಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಶಾಸಕರ ಮೇಲೆ ಗುಂಡು ಹಾರಿಸಿದ ಆರೋಪಿಗಳನ್ನು ಬಂಧಿಸಿ ಅವರು ಬಳಸಿದ್ದ ರಿವಾಲ್ವರ್ ನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಮುಂದಿನ ಸುದ್ದಿ ಗ್ಯಾಂಗ್ ರೇಪ್ ಗೆ ಒಳಗಾಗಿ ಗರ್ಭಿಣಿಯಾದ ಮಹಿಳೆ ಹುಟ್ಟಿದ ಮಗುವನ್ನು ಮಾಡಿದ್ದೇನು ಗೊತ್ತಾ?