Select Your Language

Notifications

webdunia
webdunia
webdunia
webdunia

ಸಲ್ಮಾನ್ ಮನೆ ಹೊರಗೆ ಗುಂಡಿನ ದಾಳಿಗೆ ಬಳಸಿದ ಪಿಸ್ತೂಲ್ ನದಿಯಲ್ಲಿ ಪತ್ತೆ

ಸಲ್ಮಾನ್ ಮನೆ ಹೊರಗೆ ಗುಂಡಿನ ದಾಳಿಗೆ ಬಳಸಿದ ಪಿಸ್ತೂಲ್ ನದಿಯಲ್ಲಿ ಪತ್ತೆ

Sampriya

ಮುಂಬೈ , ಮಂಗಳವಾರ, 23 ಏಪ್ರಿಲ್ 2024 (16:45 IST)
Photo Courtesy X
ಮುಂಬೈ: ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ನಿವಾಸದ ಹೊರಗೆ ನಡೆಸಿದ ಗುಂಡಿನ ದಾಳಿಗೆ ಆರೋಪಿಗಳು ಬಳಸಿದ ಶಸ್ತ್ರಾಸ್ತ್ರಗಳನ್ನು ಮುಂಬೈ ಪೊಲೀಸರ ಅಪರಾಧ ವಿಭಾಗ ಪತ್ತೆಹಚ್ಚಿದೆ.

ದಾಳಿಗೆ ಬಳಸಿದ ಪಿಸ್ತೂಲ್, ಮ್ಯಾಗಜೀನ್ ಮತ್ತು ಬುಲೆಟ್‌ಗಳನ್ನು ಗುಜರಾತ್‌ನ ತಾಪಿ ನದಿಯಲ್ಲಿ ಪತ್ತೆಹಚ್ಚಲಾಗಿದೆ.

ಎನ್‌ಕೌಂಟರ್ ಸ್ಪೆಷಲಿಸ್ಟ್, ಹಿರಿಯ ಪೊಲೀಸ್ ಇನ್ಸ್‌ಪೆಕ್ಟರ್ ದಯಾ ನಾಯಕ್ ಸೇರಿದಂತೆ 12 ಅಧಿಕಾರಿಗಳ ತಂಡ ಇನ್ನೂ ಸ್ಥಳದಲ್ಲಿ ಕಾರ್ಯಾಚರಣೆ ನಡೆಸುತ್ತಿದೆ. ಸ್ಕೂಬಾ ಡೈವರ್‌ಗಳ ಸಹಾಯದಿಂದ ಶೋಧ ಕಾರ್ಯ ನಡೆಸಲಾಗುತ್ತಿದೆ.

ಏಪ್ರಿಲ್‌ 14ರಂದು ಮುಂಜಾನೆ 5ರ ಸುಮಾರಿಗೆ ಎರಡು ಬೈಕ್‌ಗಳಲ್ಲಿ ಬಂದ ಇಬ್ಬರು ಆರೋಪಿಗಳು ಮುಂಬೈನ ಬಾಂದ್ರಾ ಪ್ರದೇಶದಲ್ಲಿರುವ ಸಲ್ಮಾನ್ ಖಾನ್ ಗ್ಯಾಲಕ್ಸಿ ಅಪಾರ್ಟ್‌ಮೆಂಟ್‌ ಎದುರು ನಾಲ್ಕು ಸುತ್ತು ಗುಂಡು ಹಾರಿಸಿ ಪರಾರಿಯಾಗಿದ್ದರು.

ಪ್ರಕರಣ ಸಂಬಂದ  ಆರೋಪಿಗಳಾದ ವಿಕ್ಕಿ ಗುಪ್ತಾ (24) ಮತ್ತು ಸಾಗರ್ ಪಾಲ್ (21) ರನ್ನು ಗುಜರಾತ್‌ನ ಭುಜ್‌ನಲ್ಲಿ ಬಂಧಿಸಿದ್ದರು.

Share this Story:

Follow Webdunia kannada

ಮುಂದಿನ ಸುದ್ದಿ

ಜಾಮೀನಿಗೆ ಸುಪ್ರೀಂ ತಡೆ: ಮುರುಘಾ ಶರಣರು ಮತ್ತೇ ಜೈಲಿಗೆ