Select Your Language

Notifications

webdunia
webdunia
webdunia
webdunia

ಶೀಘ್ರವೇ ಗುಣಮುಖರಾಗುವಂತೆ ಪ್ರಧಾನಿ ಶುಭಹಾರೈಕೆ

ಶೀಘ್ರವೇ ಗುಣಮುಖರಾಗುವಂತೆ ಪ್ರಧಾನಿ ಶುಭಹಾರೈಕೆ
ನವದೆಹಲಿ , ಶುಕ್ರವಾರ, 3 ಜೂನ್ 2022 (12:45 IST)
ನವದೆಹಲಿ : ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾಗಾಂಧಿ ಅವರಿಗೆ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿದ್ದು, ಶೀಘ್ರವೇ ಗುಣಮುಖರಾಗುವಂತೆ ಪ್ರಧಾನಿ ನರೇಂದ್ರ ಮೋದಿ ಶುಭ ಹಾರೈಸಿದ್ದಾರೆ.
 
ಈ ಕುರಿತು ಟ್ವೀಟ್ ಮಾಡಿರುವ ಅವರು, ಶ್ರೀಮತಿ ಸೋನಿಯಾ ಗಾಂಧಿ ಅವರು ಶೀಘ್ರವೇ ಕೋವಿಡ್ನಿಂದ ಗುಣಮುಖರಾಗಲಿ ಎಂದು ಹೇಳಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ಕಾಂಗ್ರೆಸ್ ವಕ್ತಾರ ರಣದೀಪ್ ಸಿಂಗ್ ಸುರ್ಜೇವಾಲಾ ಇಂದು ಟ್ವೀಟ್ ಮೂಲಕ ತಿಳಿಸಿದ್ದರು. 

ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿಗೆ ಸಮನ್ಸ್ ಜಾರಿಗೊಳಿಸಿದ್ದು, ಜೂನ್ 8ರಂದು ವಿಚಾರಣೆಗೆ ಹಾಜರಾಗುವಂತೆ ತಿಳಿಸಿತ್ತು.

ಈ ಕುರಿತಂತೆ ರಣದೀಪ್ ಸಿಂಗ್ ಸುರ್ಜೆವಾಲಾ ಅವರು, ಕಳೆದ ವಾರ ಸೋನಿಯಾ ಗಾಂಧಿ ಅವರು ಮುಖಂಡರು ಮತ್ತು ಕಾರ್ಯಕರ್ತರೊಂದಿಗೆ ಸರಣಿ ಸಭೆಗಳನ್ನು ನಡೆಸುತ್ತಿದ್ದರು.


Share this Story:

Follow Webdunia kannada

ಮುಂದಿನ ಸುದ್ದಿ

ಕುತೂಹಲಕ್ಕೆ ತೆರೆ ಎಳೆದ ಗಂಗೂಲಿ ?