ಇನ್‌ಸ್ಟಾಗ್ರಾಂನಲ್ಲಿ ವಿಚ್ಛೇಧನ ನೀಡಿ ಸುದ್ದಿಯಾಗಿದ್ದ ದುಬೈಗೆ ರಾಜಕುಮಾರಿಗೆ ಮತ್ತೇ ಮದುವೆ

Sampriya
ಗುರುವಾರ, 28 ಆಗಸ್ಟ್ 2025 (19:20 IST)
Photo Credit X
ನವದೆಹಲಿ: ದುಬೈನ ರಾಜಕುಮಾರಿ ಶೇಖಾ ಮಹ್ರಾ ಬಿಂತ್ ಮೊಹಮ್ಮದ್ ಬಿನ್ ರಶೀದ್ ಅಲ್ ಮಕ್ತೌಮ್ ತನ್ನ ಆಘಾತಕಾರಿ ವಿಚ್ಛೇದನವನ್ನು ಜಗತ್ತಿಗೆ ಘೋಷಿಸಿದ ಒಂದು ವರ್ಷದ ನಂತರ ರಾಪರ್ ಫ್ರೆಂಚ್ ಮೊಂಟಾನಾ ಅವರೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. 

ಮದುವೆಯ ದಿನಾಂಕವನ್ನು ಇನ್ನೂ ನಿಗದಿಪಡಿಸದಿದ್ದರೂ ಈ ಜೋಡಿ ಜೂನ್‌ ತಿಂಗಳಿನಲ್ಲಿ ಉಂಗುರ ಬದಲಾಯಿಸಿದ್ದಾರೆ ಎಂದು ತಿಳಿದುಬಂದಿದೆ. 

ಶೇಖಾ ಮಹ್ರಾ ಅವರು ತಮ್ಮ ಮೊದಲ ಮದುವೆಯ ವಿಚ್ಛೇಧನವನ್ನು ಸಾಮಾಜಿಕ ಜಾಲತಾಣ ಇನ್ಸ್ಟಾಗ್ರಾಮ್‌ನಲ್ಲಿ ಘೋಷಿಸುವ ಮೂಲಕ ಜಾಗತಿಕ ಮಟ್ಟದಲ್ಲಿ ಸುದ್ದಿಯಾಗಿದ್ದರು. ಈ ಘೋಷಣೆಯ ಒಂದು ವರ್ಷದ ನಂತರ ಈ ಪ್ರಕಟಣೆ ಹೊರ ಬಿದ್ದಿದೆ. ಮಾಂಟಾನಾ ಅವರ ಪ್ರತಿನಿಧಿಯೊಬ್ಬರು ನಿಶ್ಚಿತಾರ್ಥವನ್ನು ದೃಢಪಡಿಸಿದ್ದಾರೆ.

ಜುಲೈ 2024 ರಲ್ಲಿ ಶೇಖ್ ಮಹ್ರಾ ಅವರು ಎಮಿರಾಟಿ ಉದ್ಯಮಿ ಶೇಖ್ ಮನಾ ಬಿನ್ ಮೊಹಮ್ಮದ್ ಬಿನ್ ರಶೀದ್ ಬಿನ್ ಮನಾ ಅಲ್ ಮಕ್ತೌಮ್ ಅವರಿಗೆ ವಿಚ್ಛೇದನವನ್ನು ಘೋಷಿಸಿದ್ದರು. "ಪ್ರಿಯ ಪತಿಯೇ, ನೀವು ಇತರರೊಂದಿಗೆ ಕಾರ್ಯನಿರತರಾಗಿರುವುದರಿಂದ, ನಾನು ವಿಚ್ಛೇದನವನ್ನು ಘೋಷಿಸುತ್ತೇನೆ" ಎಂದು ಇನ್‌ಸ್ಟಾಗ್ರಾಮ್‌ನಲ್ಲಿ ಬರೆದು ಭಾರೀ ಸುದ್ದಿಯಾಗಿದ್ದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇದೇ ಗುರುವಾರ, ಶುಕ್ರವಾರ ಸಿಎಂ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ಸಿಗಲ್ಲ

ಬೆಳಗಾವಿ ಕೃಷ್ಣಮೃಗ ಸಾವು ಪ್ರಕರಣ, ಬಂತು ಪ್ರಯೋಗಾಲಯದ ವರದಿ

60 ಅಡಿ ಆಳದ ಕಾಲುವೆಗೆ ಬಿದ್ದ ಕಾಡಾನೆ, ಕಾರ್ಯಚರಣೆ ಹೇಗೆ ನಡೆದಿತ್ತು ಗೊತ್ತಾ

ಸಹಾಯ ಕೇಳಲು ಬಂದ ಯುವತಿಗೆ ಲೈಂಗಿಕ ದೌರ್ಜನ್ಯ, ಕೋರ್ಟ್‌ಗೆ ಹಾಜರಾಗಲು ಬಿಎಸ್‌ವೈಗೆ ಸಮನ್ಸ್‌

ಸೂಸೈಡ್ ಬಾಂಬರ್ ದಾರಿ ತಪ್ಪಿದ ಮಗ: ಕಾಂಗ್ರೆಸ್ ಸಂಸದನ ಹೇಳಿಕೆ ಕೇಳಿದ್ರೆ ಶಾಕ್

ಮುಂದಿನ ಸುದ್ದಿ
Show comments