Webdunia - Bharat's app for daily news and videos

Install App

ಕ್ಯಾಬ್‍ಗಾಗಿ ಕಾಯುತ್ತಿದ್ದ ಮಹಿಳೆಯ ಮೇಲೆ ಲಿಫ್ಟ್ ಕೊಡುವ ನೆಪದಲ್ಲಿ ಅತ್ಯಾಚಾರ ಎಸಗಿದ ಕಾಮುಕರು

Webdunia
ಮಂಗಳವಾರ, 26 ಫೆಬ್ರವರಿ 2019 (06:47 IST)
ಚಂಡೀಗಢ : ಕ್ಯಾಬ್‍ಗಾಗಿ ಕಾಯುತ್ತಿದ್ದ 27 ವರ್ಷದ ಮಹಿಳೆಗೆ ಕಾಮುಕರು ಲಿಫ್ಟ್ ಕೊಡುವುದಾಗಿ ಹೇಳಿ ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿರುವ ಘಟನೆ ಹರಿಯಾಣದ ಗುರುಗ್ರಾಮ್‍ನಲ್ಲಿ ನಡೆದಿದೆ.


ಶನಿವಾರ ಮಹಿಳೆಯೋಬ್ಬಳು ಮನೆಗೆ ತೆರಳಲು ಸುಮಾರು ರಾತ್ರಿ 1 ಗಂಟೆಯ ಸಮಯದಲ್ಲಿ ಇಫ್ಕೊ ಚೌಕ್ ಬಳಿ ಕ್ಯಾಬ್ ಗಾಗಿ ಕಾಯುತ್ತಿದ್ದಳು. ಆ ವೇಳೆ ಬಿಳಿ ಮಾರುತಿ ಸ್ವಿಫ್ಟ್ ನಲ್ಲಿ ಬಂದ ಮೂವರು ಕಾಮುಕರು ದೆಹಲಿಯ ಆಜಾದ್ಪುರದ ನಿವಾಸದಲ್ಲಿ ಬಿಡುವುದಾಗಿ ಹೇಳಿ ಸಂತ್ರಸ್ತೆಯನ್ನು ಕಾರಿನಲ್ಲಿ ಕೂರಿಸಿಕೊಂಡಿದ್ದಾರೆ. ನಂತರ ಆಕೆಯನ್ನು  ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಇಬ್ಬರು ಸಂತ್ರಸ್ತೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ.


ಈ ಘಟನೆಯ ಬಳಿಕ ಸಂತ್ರಸ್ತೆ ಪೊಲೀಸ್ ಠಾಣೆಗೆ ಬಂದು ಅಪರಿಚಿತ ಆರೋಪಿಗಳ ವಿರುದ್ಧ ದೂರು ನೀಡಿದ್ದಾಳೆ. ಐಪಿಸಿ ಸೆಕ್ಷನ್ 376ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments