Webdunia - Bharat's app for daily news and videos

Install App

ಪವಿತ್ರವಾದ ಯಮುನಾ ನದಿಗೆ ಕಳಂಕ ಹೆಚ್ಚಿದ್ದೆ ಆಪ್‌ ಸೋಲಿಗೆ ಕಾರಣ: ಅಶೋಕ್‌

Sampriya
ಶನಿವಾರ, 8 ಫೆಬ್ರವರಿ 2025 (12:37 IST)
ಬೆಂಗಳೂರು: ಎಎಪಿ ನಾಯಕರಾದ ಅರವಿಂದ್‌ ಕೇಜ್ರಿವಾಲ್‌ ಸಾವಿರಾರು ವರ್ಷ ಇತಿಹಾಸ ಹೊಂದಿರುವ ಯಮುನಾ ನದಿ ಮೇಲೆ ಕಳಂಕ ಹಚ್ಚಿದ್ದರು. ಅಲ್ಲದೇ ಜೈಲಿನಲ್ಲಿದ್ದುಕೊಂಡು 2 ತಿಂಗಳು ಆಡಳಿತ ಸ್ಥಗಿತಗೊಳಿಸಿದ್ದು ಬಿಜೆಪಿಗೆ ವರವಾಯಿತು ಎಂದು ವಿಪಕ್ಷ ನಾಯಕ ಆರ್.‌ ಅಶೋಕ್‌ ಹೇಳಿದ್ದಾರೆ.

ಸಾವಿರಾರು ವರ್ಷ ಇತಿಹಾಸ ಹೊಂದಿರುವ ಯಮುನಾ ನದಿ ಮೇಲೆ ಕೇಜ್ರಿವಾಲ್ ಕಳಂಕ ಹಾಕಿಬಿಟ್ರು. ಯಮುನಾ ನದಿ ಒಂದು ದಿನಕ್ಕೆ ಮಲಿನ ಆಗಿಲ್ಲ. ದೆಹಲಿ ಜನ ಪ್ರತಿದಿನ ಕುಡಿಯುತ್ತಿದ್ದ, ಗಂಗೆ ಅಂತ ಪೂಜೆ ಮಾಡ್ತಿದ್ದ ನೀರಿನ ಮೇಲೆಯೇ ಕಳಂಕ ತಂದರು. ಸ್ವಚ್ಛತೆ ಮಾಡುವ ಕೆಲಸ ನದಿಯದ್ದಲ್ಲ. ಕೇಜ್ರಿವಾಲ್‌ ಸರಿಯಾಗಿ ನಿರ್ವಹಣೆ ಮಾಡದೇ ನದಿ ಮೇಲೆ ಆಪಾದನೆ ಮಾಡಿಬಿಟ್ಟರು. ಇದೇ ಅವರ ಸೋಲಿಗೆ ಕಾರಣ ಎಂದು ನುಡಿದಿದ್ದಾರೆ.

ಯಾರೇ ಸಿಎಂ ಜೈಲಿಗೆ ಹೋದಾಗ ರಾಜೀನಾಮೆ ಕೊಟ್ಟು ಅವರದ್ದೇ ಪಕ್ಷದ ಮತ್ತೊಬ್ಬರಿಗೆ ಆಡಳಿತ ನಡೆಸಲು ಅವಕಾಶ ಮಾಡಿಕೊಡಬೇಕಿತ್ತು. ಆದರೆ ಇವರು 2 ತಿಂಗಳು ಜೈಲಿನಲ್ಲಿದ್ದುಕೊಂಡು ಆಡಳಿತ ಸ್ಥಗಿತಗೊಳಿಸಿದ್ದರು. ಅದರ ಶಾಪ ತಟ್ಟಿದೆ. ಜೊತೆಗೆ ಕಾಂಗ್ರೆಸ್‌ ನೇತೃತ್ವದ ಇಂಡಿಯಾ ಒಕ್ಕೂಟವೇ ಕೇಜ್ರಿವಾಲ್‌ ದೊಡ್ಡ ಕಳ್ಳ, ಭ್ರಷ್ಟಾಚಾರಿ ಎಂದು ಹೇಳಿದಾಗ ಜನರಿಗೆ ಅರ್ಥವಾಯ್ತು. ಜೊತೆಗೆ ಪ್ರಧಾನಿ ಮೋದಿ ಅವರ ಆಡಳಿತ ಬಿಜೆಪಿ ಗೆಲುವಿಗೆ ಕಾರಣ ಎಂದು ಅಶೋಕ್‌ ಹೇಳಿದ್ದಾರೆ.   

ಇಂಡಿಯಾ ಒಕ್ಕೂಟ ಒಡೆದು ಛಿದ್ರವಾಗಿದೆ. ಅಖಿಲೇಶ್‌ ಯಾದವ್‌, ಒಮರ್‌ ಅಬ್ದುಲ್ಲಾ ಎಲ್ಲರೂ ಕಾಂಗ್ರೆಸ್ಸನ್ನ ಟೀಕೆ ಮಾಡ್ತಿದ್ದಾರೆ. ಪ್ರಿಯಾಂಕಾ ಗಾಂಧಿ ಸಹ ಈಗ ಪಾರ್ಟಿಮೆಂಟ್‌ ಪ್ರವೇಶಿಸಿದ್ದು, ವಂಶಪಾರಂಪರ್ಯ ರಾಜಕಾರಣ ಮುಂದುವರಿಸಿದ್ದಾರೆ. ಮೋದಿ ಜನಕ್ಕೋಸ್ಕರ ಕೆಲಸ ಮಾಡಿದರೆ ಸೋನಿಯಾ, ರಾಹುಲ್‌, ಪ್ರಿಯಾಂಕ ತಮ್ಮ ಕುಟುಂಬಕ್ಕಾಗಿ ಮಾಡ್ತಿದ್ದಾರೆ ಎನ್ನೋದು ಜಗಜ್ಜಾಹೀರಾಗಿದೆ. ಆದ್ದರಿಂದ ಜನ ಮೋದಿ ಆಡಳಿತಕ್ಕೆ ಮೆಚ್ಚುಗೆ ವ್ಯಕ್ತಪಡಿಸಿ ದೆಹಲಿಯಲ್ಲಿ ಅಧಿಕಾರ ಕೊಟ್ಟಿದ್ದಾರೆ ಎಂದು ಹೇಳಿದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

E Tukaram: ಬಳ್ಳಾರಿ ಚುನಾವಣೆಗೆ ಬರೋಬ್ಬರಿ 21 ಕೋಟಿ ಹಣ ಬಳಕೆ: ಸಂಸದ ಇ ತುಕರಾಂ ಇಡಿ ವಶಕ್ಕೆ

Gold price today: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಶಾಕ್

Indore Raja Raghuvamshi murder: ಗುಡ್ಡ ಹತ್ತಿ ಸುಸ್ತು ಎಂದಿದ್ದ ಹಂತಕರಿಗೆ ಸೋನಂ ನೀಡಿದ್ದ ಆಫರ್ ಏನು

Raj Raghuvamshi murder: ಸೋನಂಳನ್ನು ಅಕ್ಕ ಎನ್ನುತ್ತಿದ್ದ ಮರ್ಡರ್ ಆದ ದಿನವೂ ಊರಲ್ಲೇ ಇದ್ದ

Indore Raja Raghuvamshi murder: ವಿಮಾನ ನಿಲ್ದಾಣದಲ್ಲೇ ಆರೋಪಿ ರಾಜ್ ಕುಶ್ವಾಹ್ ಗೆ ಕಪಾಳ ಮೋಕ್ಷ ವಿಡಿಯೋ

ಮುಂದಿನ ಸುದ್ದಿ
Show comments