Select Your Language

Notifications

webdunia
webdunia
webdunia
webdunia

ಮಗಳ ಮೇಲೆ ಅತ್ಯಾಚಾರವೆಸಗಿದ ಪಾಪಿ ತಂದೆ!

ಮಗಳ ಮೇಲೆ ಅತ್ಯಾಚಾರವೆಸಗಿದ ಪಾಪಿ ತಂದೆ!
ಮುಂಬೈ , ಶುಕ್ರವಾರ, 27 ಮೇ 2022 (15:19 IST)
ಮುಂಬೈ : ತಂದೆಯೇ ಮಗಳ ಮೇಲೆ ಅತ್ಯಾಚಾರವೆಸಗಿ, ಅವಳನ್ನು ಹತ್ಯೆ ಮಾಡಲು ಯತ್ನಿಸಿದ ಘಟನೆ ಮಹಾರಾಷ್ಟ್ರದ ಪುಣಾದಲ್ಲಿ ನಡೆದಿದೆ.

32 ವರ್ಷದ ವ್ಯಕ್ತಿಯೊಬ್ಬ ತನ್ನ 5 ವರ್ಷದ ಮಗಳನ್ನು ಅತ್ಯಾಚಾರ ಮಾಡಿದ್ದನು. ಇದಕ್ಕೆ ಆತನ ಪತ್ನಿ ವಿರೋಧಿಸಿದ್ದಳು. ಅಷ್ಟೇ ಅಲ್ಲದೇ ಈ ವಿಷಯಕ್ಕೆ ಪತಿ, ಪತ್ನಿ ನಡುವೆ ವಾಗ್ವಾದ ನಡೆದಿದೆ.

ಇದು ಮಿತಿಮೀರಿದ್ದು, ಆತ ಕೋಪಗೊಂಡು ತನ್ನ 5 ವರ್ಷದ ಮಗಳನ್ನು ನೆಲದ ಮೇಲೆ ದೂಡಿ, ಬೆಲ್ಟ್ನಿಂದ ಅವಳ ಕತ್ತು ಹಿಸುಕಲು ಯತ್ನಿಸಿದ್ದಾನೆ. 

ಆದರೆ ಪತ್ನಿ ಮಧ್ಯಪ್ರವೇಶಿಸಿ ಬಾಲಕಿಯನ್ನು ರಕ್ಷಿಸಿದ್ದಾಳೆ. ಈ ಹಿನ್ನೆಲೆಯಲ್ಲಿ ಆತನ ಪತ್ನಿ ಪಿಂಪ್ರಿ ಚಿಂಚ್ವಾಡ್ ಪೊಲೀಸರಿಗೆ ದೂರು ನೀಡಿದ್ದರು. ಘಟನೆ ಸಂಬಂಧಿಸಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆತನನ್ನು ಬಂಧಿಸಲಾಗಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಸೊಳ್ಳೆ ಉತ್ಪಾದನೆಗೆ ಕಾರಣವಾಗುವವರ ವಿರುದ್ಧ ಕಠಿಣ ಕ್ರಮ : ಡೆಲ್ಲಿ ಹೈಕೋರ್ಟ್