Webdunia - Bharat's app for daily news and videos

Install App

ತಂದೆಯ ಫ್ರೆಂಡ್ ಎಂದು ಶಾಲೆಯ ವಾಶ್ರೂಂನಲ್ಲೇ ಅತ್ಯಾಚಾರ ಮಾಡಿದ ಪಾಪಿ!

Webdunia
ಶುಕ್ರವಾರ, 25 ಮಾರ್ಚ್ 2022 (15:32 IST)
ಮುಂಬೈ : ನಾನು ನಿನ್ನ ತಂದೆಯ ಕ್ಲೋಸ್ ಫ್ರೆಂಡ್ ಎಂದು ಹೇಳಿ ಶಾಲೆಯ ವಾಶ್ ರೂಂನಲ್ಲಿಯೇ 11 ವರ್ಷದ ಬಾಲಕಿಯ ಅತ್ಯಾಚಾರ ಮಾಡಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸಲಾಗಿದೆ. ಬಂಧಿತನನ್ನು ಮಂಗೇಶ್ ಪದಮುಲು(40) ಎಂದು ಗುರುತಿಸಲಾಗಿದೆ. ಘಟನೆ ನಡೆದ 10 ಗಂಟೆಗಳೊಳಗೆ ಆರೋಪಿಯನ್ನು ಪುಣೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಶಾಲೆಯಲ್ಲಿ ಗುರುವಾರ ಮಧ್ಯಾಹ್ನದ ಬಳಿಕ ಅಪರಿಚಿತ ವ್ಯಕ್ತಿಯೊಬ್ಬ ತನ್ನ ಮೇಲೆ ಅತ್ಯಾಚಾರ ನಡೆಸಿರುವುದಾಗಿ ಬಾಲಕಿ ತನ್ನ ಹೆತ್ತವರ ಮುಂದೆ ಹೇಳಿಕೊಂಡಿದ್ದಾಳೆ. ಕೂಡಲೇ ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ.

ಇತ್ತ ದೂರು ದಾಖಲಿಸಿಕೊಂಡ ಪೊಲೀಸರು ಆರೋಪಿ ಪತ್ತೆಗಾಗಿ 5 ತಂಡಗಳನ್ನು ರಚಿಸಿದ್ದಾರೆ. ಅಲ್ಲದೆ ಆರೋಪಿ ಪತ್ತೆಗೆ ಬಲೆ ಬೀಸಿದರು. ಈ ವೇಳೆ ಸ್ಥಳೀಯ ಸಿಸಿಟಿವಿ ದೃಶ್ಯಗಳನ್ನು ಪರಿಶೀಲನೆ ನಡೆಸಿದ್ದಾರೆ.

ಬಾಲಕಿ ಶಾಲೆಯಲ್ಲಿರುವ ಸಂದರ್ಭದಲ್ಲಿ ಅಲ್ಲಿಗೆ ಬಂದ ವ್ಯಕ್ತಿ ಆಕೆಯನ್ನು ಮೂಲೆಯೊಂದಕ್ಕೆ ತಳ್ಳಿದ್ದಾನೆ. ನಂತರ ನಾನು ನಿನ್ನ ತಂದೆಯ ಕ್ಲೋಸ್ ಫ್ರೆಂಡ್ ಎಂದು ಹೇಳಿದ್ದಾನೆ. ಅಲ್ಲದೆ ಆಕೆಯನ್ನು ಶಾಲೆಯ ಶೌಚಾಲಯಕ್ಕೆ ತಳ್ಳಿ ತನ್ನ ಕಾಮ ತೃಷೆ ತೀರಿಸಿಕೊಂಡಿದ್ದಾನೆ. 

ಅತ್ಯಾಚಾರಕ್ಕೂ ಮುನ್ನ ಬಾಲಕಿ ಸಹಾಯಕ್ಕಾಗಿ ಕಿರುಚಾಡಿದ್ದಾಳೆ. ಈ ವೇಳೆ ಆರೋಪಿ ಬಾಲಕಿಗೆ ಬೆದರಿಕೆ ಹಾಕಿದ್ದಾನೆ. ಹೀಗಾಗಿ ಬಾಲಕಿ ತನ್ನ ಗೆಳತಿಯರ ಜೊತೆ ಈ ಬಗ್ಗೆ ಹೇಳಿಕೊಂಡಿಲ್ಲ. ಆದರೆ ಮನೆಗೆ ಬಂದ ಬಳಿಕ ಹೆತ್ತವರ ಬಳಿ ನಡೆದ ಘಟನೆಯನ್ನು ವಿವರಿಸಿದ್ದು, ಅದರಂತೆ ಪೊಲೀಸರಿಗೆ ಪೋಷಕರು ದೂರು ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Covid 19: ಭಾರತದ ಈ ನಗರದಲ್ಲಿ ಹೆಚ್ಚುತ್ತಿದೆ ಕೋವಿಡ್ 19 ಪ್ರಕರಣಗಳು

ಚಾಮರಾಜಪೇಟೆ ಪಾಕಿಸ್ತಾನದಲ್ಲಿದೆಯೋ ಭಾರತದಲ್ಲಿದೆಯೋ: ಬಿಜೆಪಿ ಆಕ್ರೋಶ

Karnataka Weather:ಮುನ್ಸೂಚನೆಯಂತೆ ಕರಾವಳಿ ಭಾಗದಲ್ಲಿ ಎಡೆಬಿಡದೆ ಸುರಿಯುತ್ತಿದೆ ಮಳೆ

ಯಾದಗಿರಿ: ಕಾಂಗ್ರೆಸ್ ಕಚೇರಿಗೆ ಬೆಂಕಿಯಿಟ್ಟ ದುರುಳರು, ಎಸಿ, ಸೋಫಾ ಬೆಂಕಿಗಾಹುತಿ

ಮನೆ ಬಿಟ್ಟು ಹೋದ ಮಗಳು: ಮನನೊಂದ ಕುಟುಂಬದಿಂದ ಮೂವರು ಆತ್ಮಹತ್ಯೆಗೆ ಶರಣು

ಮುಂದಿನ ಸುದ್ದಿ