Select Your Language

Notifications

webdunia
webdunia
webdunia
webdunia

ಆಸ್ಪತ್ರೆಯ ಆವರಣದಲ್ಲಿ ಸಮಾಜವಾದಿ ಪಕ್ಷದ ಶಾಸಕ ಮಾಡಿದ ಈ ಕೆಲಸಕ್ಕೆ ಜನರಿಂದ ಆಕ್ರೋ‍ಶ

ಆಸ್ಪತ್ರೆಯ  ಆವರಣದಲ್ಲಿ ಸಮಾಜವಾದಿ ಪಕ್ಷದ ಶಾಸಕ ಮಾಡಿದ ಈ ಕೆಲಸಕ್ಕೆ ಜನರಿಂದ ಆಕ್ರೋ‍ಶ
ಲಕ್ನೋ , ಶನಿವಾರ, 23 ನವೆಂಬರ್ 2019 (07:02 IST)
ಲಕ್ನೋ : ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡಬಾರದೆಂದು ತಿಳಿದಿದ್ದರೂ ಸಮಾಜವಾದಿ ಪಕ್ಷದ ಮುಖಂಡ, ಶಾಸಕ ಹಾಜಿ ಇಕ್ರಮ್ ಖುರೇಷಿ ಆಸ್ಪತ್ರೆಯ ಆವರಣದಲ್ಲಿ ಸಿಗರೇಟು ಸೇದಿ ಇದೀಗ ಜನರ  ಆಕ್ರೋಶಕ್ಕೆ ಗುರಿಯಾಗಿದ್ದಾರೆ.




ಉತ್ತರ ಪ್ರದೇಶದ ಮಾಜಿ ಸಿಎಂ ಮುಲಾಯಂ ಸಿಂಗ್ ಯಾದವ್ ಅವರ ಹುಟ್ಟುಹಬ್ಬದ ಪ್ರಯುಕ್ತ ಸಮಾಜವಾದಿ ಪಕ್ಷದ ಶಾಸಕರು ಮೊರಾದಾಬಾದ್ ಜಿಲ್ಲಾಸ್ಪತ್ರೆಯ ರೋಗಿಗಳಿಗೆ ಹಣ್ಣುಗಳನ್ನು ವಿತರಿಸಿದ್ದಾರೆ. ಆ ವೇಳೆ , ಶಾಸಕ ಹಾಜಿ ಇಕ್ರಮ್ ಖುರೇಷಿ ಆಸ್ಪತ್ರೆಯ ಆವರಣದಲ್ಲಿ ಸಿಗರೇಟು ಸೇದಿದ್ದಾರೆ.


ಇದನ್ನು ಸ್ಥಳೀಯರೊಬ್ಬರು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ. ಇದೀಗ ವೈರಲ್ ಆಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಶಾಸಕರ ವಿರುದ್ಧ ಜನರಿಂದ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ರಾಜ್ಯ ಎಸ್.ಸಿ. ಮೋರ್ಚಾ ಅಧ್ಯಕ್ಷ ಸಿಡಿಸಿದ್ರು ಹೊಸ ಬಾಂಬ್