ಹೆತ್ತ ತಾಯಿಯನ್ನು ತುಂಡು ತುಂಡಾಗಿ ಕತ್ತರಿಸಿ ರಕ್ತ ಕುಡಿದ ನರಭಕ್ಷಕ ಮಗ

Webdunia
ಸೋಮವಾರ, 7 ಜನವರಿ 2019 (07:54 IST)
ರಾಯ್ ಪುರ : ಮಗನೊಬ್ಬ ತನ್ನ ಹೆತ್ತ ತಾಯಿಯನ್ನು ಕೊಂದು ಆಕೆಯ ದೇಹವನ್ನು ಕತ್ತರಿಸಿ ರಕ್ತವನ್ನು ಕುಡಿದ ಭಯಾನಕ ಘಟನೆ ಛತ್ತಿಸ್‍ ಗಢದ ಕೋರ್ಬಾ ಜಿಲ್ಲೆಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ.


ದಿಲೀಪ್ ಯಾದವ್(27) ತಾಯಿಯನ್ನು ಕೊಂದು ತಿಂದ ಪಾಪಿ, ಸುಮಾರಿಯಾ(50) ಮೃತ ದುರ್ದೈವಿ. ಡಿಸೆಂಬರ್ 31ರಂದು ದಿಲೀಪ್ ತನ್ನ ತಾಯಿಯನ್ನೇ ತುಂಡು ತುಂಡಾಗಿ ಕತ್ತರಿಸಿ ಆಕೆಯ ರಕ್ತ ಕುಡಿದು, ನಂತರ ಮನೆಯೊಳಗೆ ಮೃತದೇಹದ ತುಂಡುಗಳನ್ನು ತೆಗೆದುಕೊಂಡು ಹೋಗಿ ಬೆಂಕಿ ಹಚ್ಚಿ ಸುಟ್ಟಿದ್ದಾನೆ. ಈ ದೃಶ್ಯವನ್ನು ಕಣ್ಣಾರೆ ಕಂಡ ಪಕ್ಕದ ಮನೆಯ ಮಹಿಳೆ ಭಯದಿಂದ ಯಾರಿಗೂ ಹೇಳಿರಲಿಲ್ಲ.


ಆದರೆ ಇದೀಗ ಮಹಿಳೆ ಈ ಘಟನೆಯ ಬಗ್ಗೆ ಪೊಲೀಸರಿಗೆ ತಿಳಿಸಿ ದೂರು ನೀಡಿದ್ದಾಳೆ. ಆಕೆಯ ದೂರಿನ ಆಧಾರದ ಮೇರೆಗೆ ಪೊಲೀಸರು ದಿಲೀಪ್‍ ನನ್ನು ಬಂಧಿಸಲು ಹೋದಾಗ ಆತ ತಪ್ಪಿಸಿಕೊಂಡು ಪರಾರಿಯಾಗಿದ್ದಾನೆ. ಆತನ ಬಗ್ಗೆ ಗ್ರಾಮಸ್ಥರಲ್ಲಿ ವಿಚಾರಿಸಿದಾಗ ಆತ  ತಾಂತ್ರಿಕ ವಿದ್ಯೆಯನ್ನು ತಿಳಿದಿದ್ದನು. ಅಲ್ಲದೆ ಯಾವಾಗಲು ತನ್ನ ತಂದೆ ಹಾಗೂ ಸಹೋದರನ ಸಾವಿಗೆ ನೀನೆ ಕಾರಣ ಎಂದು ತಾಯಿಯ ಬಳಿ ಜಗಳವಾಡುತ್ತಿದ್ದನು ಎಂದು ತಿಳಿಸಿದ್ದಾರೆ. ಈ ಮಾಹಿತಿಯ ಪ್ರಕಾರ ಆತ ನರಬಲಿ ಎಂದು ಹೆತ್ತವಳನ್ನು ಬಲಿ ಪಡೆದಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಂದಿನಿ ಬ್ರ್ಯಾಂಡ್‌ ಹೆಸರಿನಲ್ಲಿ ನಕಲಿ ತುಪ್ಪ‌ ಮಾರಾಟ ಜಾಲದ ಕಿಂಗ್‌ ಪಿನ್‌ ದಂಪತಿ ಸಿಸಿಬಿ ಬಲೆಗೆ

ಪಾಕ್‌ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಸಾವು ವದಂತಿ: ಅಡಿಯಾಲಾ ಜೈಲಿನ ಮುಂದೆ ಹೈಡ್ರಾಮಾ

ಈ ವಿಚಾರಕ್ಕೆ ರಾಹುಲ್, ಸೋನಿಯಾ ಭೇಟಿಯಾಗಬೇಕೆಂದ ಮಲ್ಲಿಕಾರ್ಜುನ ಖರ್ಗೆ

ದೆಹಲಿ ಸ್ಪೋಟ, ಇಂದು ಬಂಧಿಯಾಗಿರುವ ಆರೋಪಿಯ ಕೈವಾಡ ಕೇಳಿದ್ರೆ ಶಾಕ್ ಆಗುತ್ತೆ

ಪೋಕ್ಸೋ ಪ್ರಕರಣದಲ್ಲಿ ಮುರುಘಾಶ್ರೀ ಬಿಗ್‌ ರಿಲೀಫ್‌, ತೀರ್ಪು ಮಾಹಿತಿ ಇಲ್ಲಿದೆ

ಮುಂದಿನ ಸುದ್ದಿ
Show comments