Publish Date: Wed, 24 Oct 2018 (09:40 IST)
Updated Date: Wed, 24 Oct 2018 (09:42 IST)
ರಾಜಸ್ಥಾನ : ರಾಜಸ್ಥಾನದ ಶ್ರೀ ಬಿಆರ್ ಮಿರ್ದಾ ಸರ್ಕಾರಿ ಕಾಲೇಜಿನ ಕೊಠಡಿಯೊಂದರಲ್ಲಿ ಅದೇ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳ ಮೇಲೆ ಬೇರೆ ಕಾಲೇಜಿನ ವಿದ್ಯಾರ್ಥಿಯೊಬ್ಬ ಅತ್ಯಾಚಾರ ಎಸಗಿರುವ ಘಟನೆ ನಡೆದಿರುವುದಾಗಿ ತಿಳಿದುಬಂದಿದೆ.
ಅಕ್ಟೋಬರ್ 20ರಂದು ಬೇರೆ ಕಾಲೇಜು ವಿದ್ಯಾರ್ಥಿಯೊಬ್ಬ ಕೆಲಸದ ನಿಮಿತ್ತ ರಾಜಸ್ಥಾನದ ಶ್ರೀ ಬಿಆರ್ ಮಿರ್ದಾ ಸರ್ಕಾರಿ ಕಾಲೇಜಿಗೆ ಭೇಟಿ ಕೊಟ್ಟಿದ್ದ. ಆ ವೇಳೆ ಅಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯೊಬ್ಬಳನ್ನು ಕಾಲೇಜು ಕೊಠಡಿವೊಂದರಲ್ಲಿ ಕೂಡಿ ಹಾಕಿ ಅತ್ಯಾಚಾರ ಎಸಗಿದ್ದಾನೆ.
ವಿದ್ಯಾರ್ಥಿನಿಯನ್ನ ಈಗಾಗಲೇ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಗಿದ್ದು, ಆರೋಪಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಹಾಗೇ ಈಗಾಗಲೇ ಶಾಲಾ ಕ್ಲಾಸ್ ರೂಂ ಬಂದ್ ಮಾಡಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂಬುದಾಗಿ ತಿಳಿದು ಬಂದಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.