ಹಾಸ್ಟೆಲ್ ಹುಡ್ಗೀರ ಬೆತ್ತಲೆ ವೀಡಿಯೋ ಸೆರೆ ಹಿಡಿದು ಸೀನಿಯರ್ಗೆ ಕಳಿಸ್ತಿದ್ದ ವಿದ್ಯಾರ್ಥಿನಿ!

Webdunia
ಸೋಮವಾರ, 14 ಆಗಸ್ಟ್ 2023 (09:03 IST)
ಲಕ್ನೋ : ಉಡುಪಿ ಕಾಲೇಜಿನ ಲೇಡಿಸ್ ಟಾಯ್ಲೆಟ್ನಲ್ಲಿ ವೀಡಿಯೋ ಚಿತ್ರೀಕರಣ ಕೇಸ್ ರಾಜ್ಯದಲ್ಲಿ ದೊಡ್ಡಮಟ್ಟದಲ್ಲಿ ಸದ್ದು ಮಾಡಿತ್ತು. ಅದೇ ರೀತಿ ಉತ್ತರ ಪ್ರದೇಶದಲ್ಲೂ ಮತ್ತೊಂದು ಕೇಸ್ ಬೆಳಕಿಗೆ ಬಂದಿದೆ.

ತನ್ನ ಹಾಸ್ಟೆಲ್ ರೂಮೇಟ್ಸ್ಗಳ ಅಶ್ಲೀಲ ವೀಡಿಯೋ ಮತ್ತು ಫೋಟೋಗಳನ್ನ ಸೆರೆ ಹಿಡಿದು ತನ್ನ ಸೀನಿಯರ್ ಹುಡುಗನಿಗೆ ಕಳಿಸುತ್ತಿದ್ದ ವಿದ್ಯಾರ್ಥಿನಿ ಸಿಕ್ಕಿಬಿದ್ದಿರುವ ಘಟನೆ ನಡೆದಿದೆ.

ಉತ್ತರ ಪ್ರದೇಶದ ಗಾಜಿಪುರದ ಸರ್ಕಾರಿ ಹೋಮಿಯೋಪತಿ ವೈದ್ಯಕೀಯ ಕಾಲೇಜಿನ ಮೊದಲ ವರ್ಷದ ವಿದ್ಯಾರ್ಥಿನಿ ಮಂತಾಶಾ ಕಾಝ್ಮಿ ಆರೋಪಿ ಆಗಿದ್ದಾಳೆ. ಈಕೆ ತನ್ನ ಹಾಸ್ಟೆಲ್ ರೂಮೇಟ್ಸ್ಗಳ ಅಶ್ಲೀಲ ವೀಡಿಯೋ ಸೆರೆ ಹಿಡಿದು ಸೀನಿಯರ್ ವಿದ್ಯಾರ್ಥಿ ಮೊಹಮ್ಮದ್ ಅಮೀರ್ ಎಂಬಾತನಿಗೆ ಕಳುಹಿಸುತ್ತಿದ್ದಳು. ಈತ ಫೋಟೋ ಬಳಸಿಕೊಂಡು ಅವರನ್ನ ಬ್ಲ್ಯಾಕ್ ಮೇಲ್ ಮಾಡ್ತಿದ್ದ ಎಂದು ಆರೋಪಿಸಲಾಗಿದೆ.

ಸಂತ್ರಸ್ತ ವಿದ್ಯಾರ್ಥಿನಿಯರು ಕಾಲೇಜು ಆಡಳಿತ ಮಂಡಳಿ ಮತ್ತು ಸ್ಥಳೀಯ ಪೊಲೀಸರಿಗೆ ದೂರು ನೀಡಿದ ನಂತರ ಆಗಸ್ಟ್ 7ರಂದು ಘಟನೆ ಬೆಳಕಿಗೆ ಬಂದಿದೆ. ವಿದ್ಯಾರ್ಥಿಗಳ ದೂರಿನ ಮೇರೆಗೆ ಕಾಲೇಜು ಆಡಳಿತ ಮಂಡಳಿ ವಿಚಾರಣೆ ಮಾಡಿ ಆರೋಪ ದೃಢಪಡಿಸಿದೆ.

ಅಲ್ಲದೇ ವಿದ್ಯಾರ್ಥಿಗಳ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಳಾಗಿದ್ದು, ಆಯಾ ವರ್ಷಗಳಲ್ಲಿ ಬ್ಯಾಚುಲರ್ ಆಫ್ ಹೋಮಿಯೋಪತಿಕ್ ಮೆಡಿಸಿನ್ ಮತ್ತು ಸರ್ಜರಿ ವ್ಯಾಸಂಗ ಮಾಡುತ್ತಿರುವ ಮಂತಾಶಾ ಕಾಝ್ಮಿ ಹಾಗೂ ಮೊಹಮ್ಮದ್ ಅಮೀರ್ ಇಬ್ಬರನ್ನೂ 6 ತಿಂಗಳ ಕಾಲ ಅಮಾನತುಗೊಳಿಸಲಾಗಿದೆ ಎಂದು ಕಾಲೇಜಿನ ಹಂಗಾಮಿ ಪ್ರಾಂಶುಪಾಲ ಡಾ.ಬಿ.ಎನ್ ಸಾಹ್ನಿ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೊಬೈಲ್‌ನಲ್ಲಿ ಸಂಚಾರ ಸಾಥಿ ಆ್ಯಪ್‌ ಇನ್‌ಸ್ಟಾಲ್‌: ವಿವಾದ ಬೆನ್ನಲ್ಲೇ ಯೂಟರ್ನ್‌ ಹೊಡೆದ ಕೇಂದ್ರ ಸರ್ಕಾರ

ಸೂರಜ್‌ ಬೆನ್ನಲ್ಲೇ ಪ್ರಜ್ವಲ್ ರೇವಣ್ಣಗೂ ಬಿಗ್‌ಶಾಕ್: ಶಿಕ್ಷೆ ಅಮಾನತು ಕೋರಿ ಸಲ್ಲಿಸಿದ್ದ ಅರ್ಜಿ ವಜಾ

ರಷ್ಯಾ ಅಧ್ಯಕ್ಷ ಪುಟಿನ್ ಭೇಟಿಗೆ ಬಂದೋಬಸ್ತ್ ನಡುವೆ ದೆಹಲಿಯ ಎರಡು ಕಾಲೇಜಿಗೆ ಬಾಂಬ್ ಬೆದರಿಕೆ

ಭಿನ್ನಾಭಿಪ್ರಾಯ ಬಗೆಹರಿದಿದೆ: ಸಿಎಂ ಕುರ್ಚಿ ಗುದ್ದಾಟಕ್ಕೆ ಪರಮೇಶ್ವರ್ ಪ್ರತಿಕ್ರಿಯೆ

ಯಾವತ್ತಾದ್ರೂ ಬಿಟ್ಟು ಕೊಡಲೇ ಬೇಕಾಲ್ವ, ಸಿಎಂ ಆಪ್ತ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ

ಮುಂದಿನ ಸುದ್ದಿ