ಛತ್ತೀಸಗಡ : ವಿವಿಧ ಕ್ರೀಡೆಗಳಲ್ಲಿ ಮಿಂಚಲು ಸಹಾಯ ಮಾಡಿದ್ದಕ್ಕಾಗಿ ವಿದ್ಯಾರ್ಥಿನಿಯರಿಂದ ಲೈಂಗಿಕ ಸುಖಕ್ಕಾಗಿ ಬೇಡಿಕೆಯಿಟ್ಟ ಆರೋಪದ ಮೇಲೆ ಸರ್ಕಾರಿ ಶಾಲಾ ಶಿಕ್ಷಕ ಬಂಧನವಾಗಿದ್ದು,
ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.
ಛತ್ತೀಸ್ಗಢದ ಬಲೋದ್ ಜಿಲ್ಲೆಯಲ್ಲಿ ಈ ಆಘಾತಕಾರಿ ಘಟನೆ ವರದಿಯಾಗಿದ್ದು, ಆರೋಪಿ ಸಹಾಯಕ ಶಿಕ್ಷಕನನ್ನು 47 ವರ್ಷದ ದೀಪಕ್ ಕುಮಾರ್ ಸೋನಿ ಎಂದು ಗುರುತಿಸಲಾಗಿದೆ.
ಶಾಲೆಯಲ್ಲಿ ಗಣಿತ ಶಿಕ್ಷಕನಾಗಿ ಕೆಲಸ ಮಾಡುತ್ತಿರುವ ಶಿಕ್ಷಕ ಅಂತರ ಶಾಲಾ ಆಟಗಳಲ್ಲಿ ಖೋ-ಖೋ ಮತ್ತು ಕಬಡ್ಡಿ ಪಂದ್ಯಾವಳಿಗಳಲ್ಲಿ ಹಲವಾರು ಪದಕಗಳನ್ನು ಗೆಲ್ಲುವಲ್ಲಿ ತನ್ನ ಶಾಲೆಯ ವಿದ್ಯಾರ್ಥಿನಿಯರಿಗೆ ಮಾರ್ಗದರ್ಶನ ನೀಡುತ್ತಿದ್ದ ಎನ್ನಲಾಗಿದೆ.
ವರದಿ ಪ್ರಕಾರ, ಶಿಕ್ಷಕ ಬಲೋಡ್ ಜಿಲ್ಲೆಯ ಜುಂಗೇರಾ ಪ್ರಾಥಮಿಕ ಶಾಲೆಯಲ್ಲಿ ಗಣಿತ ಶಿಕ್ಷಕನಾಗಿ ಕೆಲಸ ಮಾಡುತ್ತಿದ್ದ. ಆರೋಪಿಯು ಮಧ್ಯಮ ಶಾಲಾ ವಿದ್ಯಾರ್ಥಿಗಳಿಗೆ ಖೋ-ಖೋ ಮತ್ತು ಕಬಡ್ಡಿ ತರಬೇತಿಯನ್ನೂ ನೀಡಿದ್ದಾನೆ. ತರಬೇತಿ ಪಡೆಯುತ್ತಿದ್ದ ವಿದ್ಯಾರ್ಥಿನಿಯರಿಗೆ ದೀಪಕ್ ಕುಮಾರ್ ಸೋನಿ ಕಿರುಕುಳ ನೀಡುತ್ತಿದ್ದ ಎಂದು ಆರೋಪಿಸಲಾಗಿದೆ.
ತಮ್ಮ ಶಿಕ್ಷಕರು ಅನುಚಿತವಾಗಿ ತಮ್ಮನ್ನು ಸ್ಪರ್ಶಿಸಿದ್ದಾರೆ ಎಂದು ಆರೋಪಿಸಿ ಐವರು ವಿದ್ಯಾರ್ಥಿನಿಯರು ಮತ್ತು ಅವರ ಪೋಷಕರು ದೂರು ದಾಖಲಿಸಿದ್ದಾರೆ.