Publish Date: Mon, 12 Jun 2023 (10:15 IST)
Updated Date: Mon, 12 Jun 2023 (12:18 IST)
ಮುಂಬೈ : ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಟೆಕ್ಕಿಯೊಬ್ಬನನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ.
ಆರೋಪಿ ಸಾಗರ್ ಬರ್ವೆ ಖಾಸಗಿ ಸಂಸ್ಥೆಯೊಂದರ ಡೇಟಾ ಫೀಡಿಂಗ್ ಮತ್ತು ಅನಾಲಿಟಿಕ್ಸ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದಾನೆ ಎಂದು ಮುಂಬೈ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಪ್ರಕರಣದ ತನಿಖೆ ನಡೆಸುತ್ತಿದ್ದ ಮುಂಬೈ ಪೊಲೀಸರು ಆರೋಪಿಯನ್ನು ಮುಂಬೈಗೆ ಕರೆತಂದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಆರೋಪಿಯನ್ನು ಮಂಗಳವಾರದ ವರೆಗೆ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.
ಶರದ್ ಪವಾರ್ ವಿರುದ್ಧ ಆರೋಪಿ ಫೇಸ್ಬುಕ್ನಲ್ಲಿ ಕೊಲೆ ಬೆದರಿಕೆ ಹಾಕಿದ್ದ. ಬೆದರಿಕೆಗಳನ್ನು ಪೋಸ್ಟ್ ಮಾಡಲು ಆತ ಎರಡು ನಕಲಿ ಖಾತೆಗಳನ್ನು ರಚಿಸಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.