ಲೋಕಸಭೆಯಲ್ಲೂ ಸದ್ದು ಮಾಡಿದ ವಾಲ್ಮೀಕಿ ಹಗರಣ, ಸಂಸದ ಕಾಂಗೇರಿ ಆಗ್ರಹವೇನು

Sampriya
ಸೋಮವಾರ, 22 ಜುಲೈ 2024 (18:09 IST)
Photo Courtesy X
ನವದೆಹಲಿ: ಲೋಕಸಭೆಯಲ್ಲಿ ಇಂದು ಕರ್ನಾಟಕದ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ₹187 ಕೋಟಿ ಹಗರಣವನ್ನು ಉತ್ತರ ಕನ್ನಡ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಪ್ರಸ್ತಾಪಿಸಿದರು.

ಈ ಹಗರಣವನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಿ ಸೂಕ್ತ ನಿರ್ದೇಶನ ನೀಡಬೇಕು ಎಂದು ಆಗ್ರಹಿಸಿದರು. ಕನ್ನಡದಲ್ಲಿ ವಿಷಯ ಪ್ರಸ್ತಾಪಿಸಿದ ಕಾಂಗೇರಿ ಅವರು, ಕರ್ನಾಟಕ ರಾಜ್ಯ ಹಲವು ಕ್ಷೇತ್ರಗಳಲ್ಲಿ ಉನ್ನತ ಮಟ್ಟದ ಸಾಧನೆ ಮಾಡಿದೆ. ಅದಲ್ಲದೆ ಐಟಿ ಬಿಟಿ ಕ್ಷೇತ್ರಗಳಲ್ಲಂತೂ ಜಗತ್ತಿನ ಗಮನ ಸೆಳೆದಿದೆ. ಇದರ ಮಧ್ಯೆ ಅಭಿವೃದ್ಧಿ ನಿರ್ಲಕ್ಷ್ಯದ ಜತೆಗೆ ಹಲವು ಸಮಸ್ಯೆಗಳು ಇವೆ. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ₹187 ಕೋಟಿ ಅವ್ಯವಹಾರ ಆಗಿದೆ ಎಂದರು.

ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗದ ಜನರ ಕಲ್ಯಾಣಕ್ಕೆ ಬಳಕೆಯಾಗಬೇಕಿದ್ದ ಹಣ ಈ ನಿಗಮದ ಖಜಾನೆಯ ಮೂಲಕವೇ ₹187 ಕೋಟಿಯು ಬೇನಾಮಿ ಖಾತೆಗಳಿಗೆ ಜಮಾ ಆಗಿದೆ. ಇದು ಜನರ ತೆರಿಗೆ ಹಣ. ಇದನ್ನು ಸರ್ಕಾರ ಸಹ ಒಪ್ಪಿದೆ. ಮುಖ್ಯಮಂತ್ರಿಯವರ ಬಳಿಯೇ ಹಣಕಾಸು ಖಾತೆಯೂ ಇದೆ. ಆಡಳಿತ ವ್ಯವಸ್ಥೆಯ ದುರುಪಯೋಗದ ಬಗ್ಗೆ ಕ್ರಮ ಆಗಬೇಕು ಎಂದು ಅವರು ಆಗ್ರಹಿಸಿದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆರ್‌ಎಸ್‌ಎಸ್‌, ಬಿಜೆಪಿ ಸಿದ್ಧಾಂತ ದೇಶವನ್ನು ನಾಶಪಡಿಸುತ್ತದೆ: ಮಲ್ಲಿಕಾರ್ಜುನ ಖರ್ಗೆ

ಬಿಜೆಪಿ ಸಾರ್ವಜನಿಕರ ನಂಬಿಕೆಯನ್ನು ಕಳೆದುಕೊಂಡಿದೆ: ಪ್ರಿಯಾಂಕಾ ಗಾಂಧಿ

ಮತ್ತಷ್ಟು ದಾಖಲೆ ಸಮೇತ ಎದುರು ಬರುತ್ತೇವೆ: ಗುಡುಗಿದ ಡಿಕೆ ಶಿವಕುಮಾರ್‌

ಸಿಡ್ನಿ: ಗುಂಡಿನ ದಾಳಿಯಲ್ಲಿ ಹಲವಾರು ಮಂದಿ ಸಾವು

ಆವರಿಸಿದ ದಟ್ಟ ಮಂಜು, ಕಾಲುವೆಗೆ ಉರುಳಿದ ಕಾರು, ದಂಪತಿ ದುರಂತ ಅಂತ್ಯ

ಮುಂದಿನ ಸುದ್ದಿ
Show comments