ಅಹಮದಾಬಾದ್ : ಗಂಡನ ಮನೆಯಲ್ಲಿ ವರದಕ್ಷಿಣೆ ಕಿರುಕುಳ ನೀಡಿದ್ದಕ್ಕೆ ಮಹಿಳೆಯರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿರುವ ಉದಾಹರಣೆಗಳು ಸಾಕಷ್ಟು ಇವೆ. ಆದರೆ ಇಲ್ಲೊಬ್ಬ ಮಹಿಳೆ ಗಂಡ ಹಾಗೂ ಅತ್ತೆ ಸೇರಿಕೊಂಡು ನನಗೆ ಬಲವಂತವಾಗಿ ಈರುಳ್ಳಿ, ಬೆಳ್ಳುಳ್ಳಿ ತಿನ್ನಿಸಿದ್ದಾರೆಂದು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ ಘಟನೆ ಮೆಹ್ಸಾನಾದಲ್ಲಿ ನಡೆದಿದೆ.
25 ವರ್ಷದ ಮಹಿಳೆಯೊಬ್ಬಳು,’ ನಾನು ಪಟೇಲ್ ಸಮುದಾಯಕ್ಕೆ ಸೇರಿದ್ದು, ಸ್ವಾಮಿ ನಾರಾಯಣ ಪಂಥದ ಅನುಯಾಯಿಯಾಗಿದ್ದೇನೆ. ಆದ್ದರಿಂದ ನಾವು ಈರುಳ್ಳಿ ಮತ್ತು ಬೆಳ್ಳುಳ್ಳಿಯನ್ನು ತಿನ್ನುವುದಿಲ್ಲ. ಆದರೆ ಅತ್ತೆ ಮತ್ತು ಪತಿ ಜತೆ ಸೇರಿ ಈರುಳ್ಳಿ, ಬೆಳ್ಳುಳ್ಳಿ ಮಿಶ್ರಿತ ಆಹಾರವನ್ನು ಬಲವಂತವಾಗಿ ತಿನ್ನಿಸಿದ್ದಾರೆ. ನಾನು ತಿನ್ನಲು ನಿರಾಕರಿಸಿದಾಗ ಅವರಿಬ್ಬರು ಸೇರಿ ನನಗೆ ಥಳಿಸಿದ್ದಾರೆ ಎಂದು ಗಾಂಧಿ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾಳೆ.
ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ