Select Your Language

Notifications

webdunia
webdunia
webdunia
webdunia

ಬಾಲಕಿಯನ್ನು ಬಲವಂತವಾಗಿ ಕರೆಸಿಕೊಂಡು ಅತ್ಯಾಚಾರವೆಸಗಿದ ಯುವಕ

ಬಾಲಕಿಯನ್ನು ಬಲವಂತವಾಗಿ ಕರೆಸಿಕೊಂಡು ಅತ್ಯಾಚಾರವೆಸಗಿದ ಯುವಕ
delhi , ಸೋಮವಾರ, 13 ನವೆಂಬರ್ 2023 (10:37 IST)
ಎರಡು ಪ್ರತ್ಯೇಕ ಘಟನೆಯಲ್ಲಿ ಬಾಲಕಿಯೊಬ್ಬಳ ಮೇಲೆ ಅತ್ಯಾಚಾರವಾಗಿದ್ದು, ಮತ್ತೂಂದು ಪ್ರಕರಣದಲ್ಲಿ ಯುವತಿಯನ್ನು ಚುಡಾಯಿಸಿದ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ. 
 
ಪುಣೆ ಜಿಲ್ಲೆಯ ಖಂಡಾಲಾ ತಾಲೂಕಿನ ಬಾಲಕಿ ಮೇಲೆ ಅದೇ ಗ್ರಾಮದ ಹರೀಶ್‌ ಅತ್ಯಾಚಾರ ಎಸಗಿದ್ದಾನೆ. 16 ವಯಸ್ಸಿನ ಬಾಲಕಿ ಕಾಲೇಜೊಂದರಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಹರೀಶ್‌ ಆಕೆಯನ್ನು ಪ್ರೀತಿಸುವಂತೆ ಒತ್ತಾಯಿಸಿ, ಆಕೆಯನ್ನು ಊರಿಗೆ ಕರೆಸಿಕೊಂಡಿದ್ದಾನೆ. 
 
ಆತನ ಕಾಟ ತಡೆಯಲಾಗದೆ, ಪುಣೆ ಬಸ್‌ ನಿಲ್ದಾಣಕ್ಕೆ ಬಂದಿದ್ದ ಬಾಲಕಿಯನ್ನು ಬಳಿಯ ನಿರ್ಜನ ಪ್ರದೇಶಕ್ಕೆ ಕರೆಕೊಂಡು ಹೋಗಿ ಅತ್ಯಾಚಾರವೆಸಗಿದ್ದಾನೆ. ಆತನ ಬೆದರಿಕೆಯಿಂದ ಸುಮ್ಮನಿದ್ದ ಯುವತಿ ಬಳಿಕ ಮನೆಯವರಿಗೆ ವಿಷಯ ತಿಳಿಸಿದ್ದಾಳೆ. ಪುಣೆ ನಗರದ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
 
ಮತ್ತೂಂದು ಪ್ರಕರಣದಲ್ಲಿ ಯುವತಿಯನ್ನು ನಿತ್ಯ ಚುಡಾಯಿಸುತ್ತಿದ್ದ ಸಾರ್ವಜನಿಕರು ಧರ್ಮದೇಟು ನೀಡಿದ್ದಾರೆ. ಕಾಲೇಜಿಗೆ ಹೋಗುತ್ತಿದ್ದ ಯುವತಿಯನ್ನು ಎಲ್ಲಂದರಲ್ಲಿ ಚುಡಾಯಿಸುತ್ತಿದ್ದ. ಇದೀಗ ಪೊಲೀಸರ ಅತಿಥಿಯಾಗಿದ್ದಾನೆ.

Share this Story:

Follow Webdunia kannada

ಮುಂದಿನ ಸುದ್ದಿ

ಅಶ್ಲೀಲ ಚಿತ್ರಗಳನ್ನು ನೋಡುವಂತೆ ವಿದ್ಯಾರ್ಥಿನಿಯರಿಗೆ ಒತ್ತಡ ಹೇರಿದ ಶಿಕ್ಷಕ