Select Your Language

Notifications

webdunia
webdunia
webdunia
webdunia

ಮಹಾಕುಂಭಮೇಳದಲ್ಲಿ ಅನೇಕ ಪವಿತ್ರ ಸ್ನಾನ ಬಾಕಿಯಿವೆ: ಇನ್ನಾದರೂ ಎಚ್ಚೆತ್ತುಕೊಳ್ಳಿ ಎಂದ ಖರ್ಗೆ

AICC President Mallikarjuna Kharge

Sampriya

ನವದೆಹಲಿ , ಬುಧವಾರ, 29 ಜನವರಿ 2025 (14:10 IST)
Photo Courtesy X
ನವದೆಹಲಿ: ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿವ ಮಹಾಕುಂಭಮೇಳದ ಮೌನಿ ಅಮಾವಾಸ್ಯೆಯಂದು ತ್ರಿವೇಣಿ ಸಂಗಮದಲ್ಲಿ ಸಂಭವಿಸಿರುವ ಕಾಲ್ತುಳಿತ ಅವಘಡದ ಹಿನ್ನೆಲೆಯಲ್ಲಿ ಕೇಂದ್ರ ಮತ್ತು ಉತ್ತರ ಪ್ರದೇಶದ ಸರ್ಕಾರಗಳ ವಿರುದ್ಧ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೆಂಡಕಾರಿದ್ದಾರೆ.

ಮಹಾಕುಂಭಮೇಳವನ್ನು ಉತ್ತಮ ರೀತಿಯಲ್ಲಿ ನಿರ್ವಹಿಸುವಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸಂಪೂರ್ಣ ವೈಫಲ್ಯ ಕಂಡಿವೆ ಎಂದು ಖರ್ಗೆ ಆರೋಪಿಸಿದ್ದಾರೆ.

ಮೌನಿ ಅಮಾವಾಸ್ಯೆ ದಿನವಾದ ಇಂದು ತ್ರಿವೇಣಿ ಸಂಗಮದಲ್ಲಿ ಪ್ರವಿತ್ರ ಸ್ನಾನ ಮಾಡಲು ಲಕ್ಷಾಂತರ ಮಂದಿ ಪ್ರಯಾಗ್‌ರಾಜ್‌ನಲ್ಲಿ ಜಮಾಯಿಸಿದ್ದಾರೆ. ಈ ನಡುವೆ ಉಂಟಾದ ಕಾಲ್ತುಳಿತದಲ್ಲಿ ಹಲವರು ಮೃತಪಟ್ಟಿರುವ ಹಾಗೂ ಅನೇಕ ಮಂದಿ ಗಾಯಗೊಂಡಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ.  

ಮಹಾಕುಂಭ ಮೇಳದಲ್ಲಿ ನಡೆದ ಕಾಲ್ತುಳಿತದಲ್ಲಿ ಅನೇಕ ಮಂದಿ ಮೃತಪಟ್ಟಿದ್ದು, ಹಲವರು ಗಾಯಗೊಂಡಿರುವುದು ಅತ್ಯಂತ ದುಃಖಕರ ಸಂಗತಿಯಾಗಿದೆ. ಮೃತರ ಕುಟುಂಬಕ್ಕೆ ನನ್ನ ಸಂತಾಪಗಳು. ಗಾಯಾಳುಗಳು ಶೀಘ್ರವೇ ಗುಣಮುಖರಾಗಲಿ ಎಂದು ಹಾರೈಸುತ್ತೇನೆ' ಎಂದು ಹೇಳಿದ್ದಾರೆ.

'ಸಮರ್ಪಕ ವ್ಯವಸ್ಥೆ ಇಲ್ಲದೇ ಇರುವುದು, ವಿಐಪಿ ಚಲನವಲನ, ಸ್ವಯಂ ಪ್ರಚಾರಕ್ಕೆ ಹೆಚ್ಚಿನ ಆದ್ಯತೆ ನೀಡಿರುವುದು ಮತ್ತು ಕೆಟ್ಟ ನಿರ್ವಹಣೆಯೇ ಕಾಲ್ತುಳಿತ ಅವಘಡಕ್ಕೆ ಕಾರಣವಾಗಿದೆ. ಸಾವಿರಾರು ಕೋಟಿ ರೂಪಾಯಿ ವ್ಯಯ ಮಾಡಿದರೂ ಇಂತಹ ಕೆಟ್ಟ ವ್ಯವಸ್ಥೆ ಮಾಡಿರುವುದು ನಿಜಕ್ಕೂ ಖಂಡನಾರ್ಹ' ಎಂದು ಅವರು ಕಿಡಿಕಾರಿದ್ದಾರೆ.

ಇನ್ನೂ ಅನೇಕ ಪವಿತ್ರ ಸ್ನಾನ ಬಾಕಿಯಿವೆ. ಈಗಲಾದರೂ ಕೇಂದ್ರ ಹಾಗೂ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡು ಭವಿಷ್ಯದಲ್ಲಿ ಇಂತಹ ಅಹಿತಕರ ಘಟನೆಗಳು ನಡೆಯದಂತೆ ವ್ಯವಸ್ಥೆಯಲ್ಲಿ ಸುಧಾರಣೆ ತರಬೇಕಿದೆ ಎಂದು ಅವರು ಒತ್ತಾಯಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಬೆಂಗಳೂರಿನಲ್ಲಿ ಮುಂದಿನ ಕೆಲವು ದಿನಗಳಿಗೆ ಹೋಟೆಲ್ ಗಳೂ ಬಲು ದುಬಾರಿ: ಕಾರಣ ಇಲ್ಲಿದೆ