Webdunia - Bharat's app for daily news and videos

Install App

ಹತ್ಯೆಗೂ ಮುನ್ನಾ ಜೀವರಕ್ಷಣೆಗಾಗಿ ಹಿಮಾನಿ ನರ್ವಾಲ್ ಏನೆಲ್ಲಾ ಮಾಡಿದ್ರು, ಅದಕ್ಕೆ ಇದೆ ಸಾಕ್ಷಿ

Sampriya
ಸೋಮವಾರ, 3 ಮಾರ್ಚ್ 2025 (17:44 IST)
Photo Courtesy X
ರೋಹ್ಟಕ್ (ಹರಿಯಾಣ): ಕಾಂಗ್ರೆಸ್ ಕಾರ್ಯಕರ್ತೆ ಹಿಮಾನಿ ನರ್ವಾಲ್ ಹತ್ಯೆಗೆ ಸಂಬಂಧಿಸಿದಂತೆ ಬಂಧಿತ ಆರೋಪಿಯ ಕೈಗಳಲ್ಲಿ ಕಚ್ಚಿದ ಹಾಗೂ ಗೀರಿದ ಗುರುತುಗಳನ್ನು ಪೊಲೀಸರು ಪತ್ತೆ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಪೊಲೀಸ್ ಮೂಲಗಳ ಪ್ರಕಾರ, ಬಂಧಿತ ಆರೋಪಿ ಸಚಿನ್ ಎಂದು ಗುರುತಿಸಲಾಗಿದ್ದು, ಹಿಮಾನಿ ತನ್ನ ಜೀವದ ರಕ್ಷಣೆಗಾಗಿ, ಆತನಿಂದ ಪಾರಾಗಲು ಕೈಗೆ ಕಚ್ಚಿರುವುದಾಗಿ ಮೇಲ್ನೋಟಕ್ಕೆ ತಿಳಿದುಬಂದಿದೆ.

ಇನ್ನೂ ಹತ್ಯೆ ಬಳಿಕ ಸೂಟ್‌ಕೇಶ್‌ನಲ್ಲಿ ಶವವನ್ನು ತುಂಬುವ ಮೊದಲು ಆಕೆಯಲ್ಲಿದ್ದ ಸರ ಹಾಗೂ ಉಂಗುರವನ್ನು ಆರೋಪಿ ತೆಗೆದಿದ್ದಾನೆ.

ಆರೋಪಿಯ ಬಳಿ ಕೆಲವು ಆಭರಣಗಳ ಚೀಟಿಯೂ ಪತ್ತೆಯಾಗಿದ್ದು, ಹಿಮಾನಿ ಚಿನ್ನಾಭರಣಗಳನ್ನು ಇಟ್ಟುಕೊಂಡು ಆತ ಸಾಲ ಪಡೆದಿದ್ದಾನೆಯೇ ಎಂಬುದನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಕಾಂಗ್ರೆಸ್ ಕಾರ್ಯಕರ್ತೆ ಹಿಮಾನಿ ನರ್ವಾಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಸೋಮವಾರ ಒಬ್ಬ ಆರೋಪಿಯನ್ನು ಬಂಧಿಸಿದ್ದರು.

ಬಂಧನದ ನಂತರ ಸೋಮವಾರ ಮೃತನ ಸಹೋದರ ಆರೋಪಿಗೆ ಮರಣದಂಡನೆ ವಿಧಿಸಬೇಕೆಂದು ಒತ್ತಾಯಿಸಿದರು.

ಎಎನ್‌ಐ ಜತೆ ಮಾತನಾಡಿದ ಹಿಮಾನಿ ನರ್ವಾಲ್ ಸಹೋದರ ಜತಿನ್, "ಒಬ್ಬ ಆರೋಪಿಯನ್ನು ಬಂಧಿಸಲಾಗಿದೆ, ಇಂದು ನಾವು ಅವಳನ್ನು (ಹಿಮಾನಿ ನರ್ವಾಲ್) ಶವಸಂಸ್ಕಾರ ಮಾಡುತ್ತೇವೆ. ಮಾಧ್ಯಮಗಳಲ್ಲಿ ಸಾಕಷ್ಟು ವದಂತಿಗಳು ಹರಡುತ್ತಿವೆ. ಮಾಧ್ಯಮಗಳಲ್ಲಿ ತಪ್ಪು ಮಾಹಿತಿ ಹರಡದಂತೆ ನಾನು ಮಾಧ್ಯಮಗಳಲ್ಲಿ ವಿನಂತಿಸುತ್ತೇನೆ. ನಮಗೆ ನ್ಯಾಯ ಸಿಗುತ್ತದೆ. ಆರೋಪಿಗಳು ಯಾರೆಂದು ನಮಗೆ ಇನ್ನೂ ತಿಳಿದಿಲ್ಲ; ಪೊಲೀಸರು ನಮಗೆ ಯಾವುದೇ ಮಾಹಿತಿ ನೀಡಿಲ್ಲ. ಆರೋಪಿಗೆ ಮರಣದಂಡನೆ ಬೇಕು" ಎಂದು ಹೇಳಿದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕವು ಅಪರಾಧಿಗಳ ರಾಜ್ಯವಾಗುತ್ತಿದೆ: ಶೋಭಾ ಕರಂದ್ಲಾಜೆ ಆಕ್ಷೇಪ

ಸಿದ್ದರಾಮಯ್ಯನನ್ನು ಕೊಂದ್ರೆ ಹಿಂದೂಗಳಿಗೆ ನೆಮ್ಮದಿ ಎಂದಿದ್ದ ವ್ಯಕ್ತಿ ಅರೆಸ್ಟ್

NEET ಪರೀಕ್ಷೆ ಹೇಗಿತ್ತು ಎಂದರೆ ವಿದ್ಯಾರ್ಥಿಗಳು ಶಾಕ್ ಆಗ್ತಿದ್ದಾರೆ: ಕಾರಣ ಇಲ್ಲಿದೆ

ಕಾನೂನು ಬಾಹಿರ ಟೆಂಡರ್ ಮೂಲಕ ಸರ್ಕಾರದಿಂದ ಭಾರೀ ಮೋಸ: ಛಲವಾದಿ ನಾರಾಯಣಸ್ವಾಮಿ

Arecanut price today: ಇಂದು ಅಡಿಕೆ, ಕಾಳುಮೆಣಸು ಬೆಲೆ ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments