Select Your Language

Notifications

webdunia
webdunia
webdunia
webdunia

ಮೋದಿ ಸರ್ಕಾರದಲ್ಲಿ ಚೀನಾ ವಿರುದ್ಧ ಮಾತನಾಡಲು ಅವಕಾಶವೇ ಇಲ್ಲ : ಮಲ್ಲಿಕಾರ್ಜುನ ಖರ್ಗೆ

ಮೋದಿ ಸರ್ಕಾರದಲ್ಲಿ ಚೀನಾ ವಿರುದ್ಧ ಮಾತನಾಡಲು ಅವಕಾಶವೇ ಇಲ್ಲ : ಮಲ್ಲಿಕಾರ್ಜುನ ಖರ್ಗೆ
ನವದೆಹಲಿ , ಶುಕ್ರವಾರ, 16 ಡಿಸೆಂಬರ್ 2022 (10:06 IST)
ನವದೆಹಲಿ : ಭಾರತೀಯ ಸೇನೆ ಮತ್ತು ಚೀನಾ ಸೇನಾ ಪಡೆಗಳ ನಡುವೆ ಅರುಣಾಚಲ ಪ್ರದೇಶದ ತವಾಂಗ್ ವಲಯದಲ್ಲಿ ಎಲ್ಎಸಿ ಬಳಿ ಡಿಸೆಂಬರ್ 9 ರಂದು ನಡೆದ ಸಂಘರ್ಷ, ಎರಡೂ ದೇಶಗಳ ಗಡಿ ಬಿಕ್ಕಟ್ಟನ್ನು ಮತ್ತಷ್ಟು ಉದ್ವಿಗ್ನಗೊಳಿಸಿದೆ.

ಈ ಕುರಿತು ಚರ್ಚೆ ನಡೆಸಬೇಕು ಎನ್ನುವ ವಿಪಕ್ಷಗಳ ಬೇಡಿಕೆಗೆ ಸಂಸತ್ತಿನಲ್ಲಿ ಉಂಟಾದ ಘರ್ಷಣೆಯನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಖಂಡಿಸಿದ್ದಾರೆ.

ಈ ಕುರಿತು ಆಕ್ರೋಶ ವ್ಯಕ್ತಪಡಿಸಿರುವ ಖರ್ಗೆ ಅವರು, `ಮೋದಿ ಸರ್ಕಾರದ ಕೆಂಗಣ್ಣು ಚೀನಾ ಕನ್ನಡಕದಿಂದ ಮುಚ್ಚಲ್ಪಟ್ಟಿದಂತೆ ತೋರುತ್ತದೆ.

ಭಾರತದ ಸಂಸತ್ತಿನಲ್ಲಿ ಚೀನಾದ ವಿರುದ್ಧ ಮಾತನಾಡಲು ಅವಕಾಶವಿಲ್ಲವೇ?’ ಎಂದು ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ. ಅಲ್ಲದೇ ವಿರೋಧ ಪಕ್ಷಗಳು ಗಡಿಯಲ್ಲಿ ಚೀನಾದ ನಡೆಗೆ ಪ್ರತಿಯಾಗಿ ಆಕ್ರಮಣಕಾರಿ ನೀತಿಯನ್ನು ಅನುಸರಿಸಲು ಯೋಜಿಸಿವೆ. 


Share this Story:

Follow Webdunia kannada

ಮುಂದಿನ ಸುದ್ದಿ

ಚುನಾವಣೆಯ ಗೆಲುವಿನ ರಹಸ್ಯ ರಿವೀಲ್ ಮಾಡಿದ ಮೋದಿ