Publish Date: Thu, 19 Dec 2019 (12:11 IST)
Updated Date: Thu, 19 Dec 2019 (12:14 IST)
ನವದೆಹಲಿ : ಪ್ರತಿಭಟನೆ ಹತ್ತಿಕ್ಕುವ ಕೆಲಸ ರಾಜ್ಯ ಸರ್ಕಾರ ಮಾಡುತ್ತಿಲ್ಲ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ
ಹೇಳಿದ್ದಾರೆ.
ಪೌರತ್ವ ತಿದ್ದಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆಗೆ ಮುಂದಾದ ಹಿನ್ನಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಲ್ಪಸಂಖ್ಯಾತರಲ್ಲಿ ಗೊಂದಲ ಸೃಷ್ಟಿಸುವ ಕೆಲಸ ನಡೀತಿದೆ. ಜನರನ್ನು ರಕ್ಷಿಸುವ ಜವಾಬ್ದಾರಿ ನಮ್ಮ ಸರ್ಕಾರದ ಮೇಲಿದೆ. ಸಿಎಎ ನಿಂದ ಮುಸ್ಲಿಂರಿಗೆ ಯಾವುದೇ ತೊಂದರೆ ಇಲ್ಲ. ಸುಳ್ಳನ್ನು ನಂಬಿ ಪ್ರತಿಭಟನೆ ಮಾಡಬೇಡಿ. ಕಾನೂನು ಮೀರಿ ವರ್ತಿಸಿದರೆ ಕಠಿಣ ಕ್ರಮ ಕೈಗೊಳ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.