Select Your Language

Notifications

webdunia
webdunia
webdunia
webdunia

ನನ್ನ ಮೇಲೆ ಹಲ್ಲೆ ನಡೆದಿದೆ : ಮಮತಾ ಬ್ಯಾನರ್ಜಿ

ನನ್ನ ಮೇಲೆ ಹಲ್ಲೆ ನಡೆದಿದೆ : ಮಮತಾ ಬ್ಯಾನರ್ಜಿ
ಲಕ್ನೋ , ಶುಕ್ರವಾರ, 4 ಮಾರ್ಚ್ 2022 (09:25 IST)
ಲಕ್ನೋ : ಬಿಜೆಪಿ ಕಾರ್ಯಕರ್ತರು ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪ ಮಾಡಿದ್ದಾರೆ.

ಉತ್ತರ ಪ್ರದೇಶ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಸಮಾಜವಾದಿ ಪಕ್ಷದ ಪರವಾಗಿ ಮಮತಾ ಬ್ಯಾನರ್ಜಿ ಪ್ರಚಾರ ನಡೆಸುತ್ತಿದ್ದಾರೆ. ಗುರುವಾರ ವಾರಣಾಸಿಯಲ್ಲಿ ರ್ಯಾಲಿಯಲ್ಲಿ ಪಾಲ್ಗೊಂಡಿದ್ದರು. ಈ ವೇಳೆ ಬಿಜೆಪಿ ಕಾರ್ಯಕರ್ತರು ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ.

ಈ ಹಿಂದೆಯೂ ನನ್ನ ಮೇಲೆ ಹಲವಾರು ಬಾರಿ ದಾಳಿ ನಡೆದಿದೆ. ದೊಣ್ಣೆಯಿಂದ ಹೊಡೆದಿದ್ದಾರೆ. ಆದರೆ ನಾನು ಎಂದಿಗೂ ತಲೆ ಬಾಗಿಲ್ಲ. ನಾನು ಹೇಡಿಯಲ್ಲ, ಹೋರಾಟಗಾರ್ತಿ ಎಂದು ತಿಳಿಸಿದ್ದಾರೆ.

ನಾನು ವಾರಣಾಸಿಗೆ ಬಂದಾಗ ಬಿಜೆಪಿ ಕಾರ್ಯಕರ್ತರು ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ. ಈ ಬೆಳವಣಿಗೆ ಬಿಜೆಪಿ ಅಧಿಕಾರ ಕಳೆದುಕೊಳ್ಳುವುದನ್ನು ಸೂಚಿಸುತ್ತದೆ ಎಂದು ಕಿಡಿಕಾರಿದ್ದಾರೆ. 

 

Share this Story:

Follow Webdunia kannada

ಮುಂದಿನ ಸುದ್ದಿ

ಪುಟೀನ್‍ಗೆ ವ್ಯಂಗ್ಯ ಮಾಡಿದ ಉಕ್ರೇನ್ ?