ಹುಡುಗಿಗೆ ಪ್ರಪೋಸ್ ಮಾಡುವ ವಿಚಾರದಲ್ಲಿ ಸ್ನೇಹಿತರಿಬ್ಬರು ನಡುವೆ ನಡೆದಿದೆ ಇಂತಹ ಘೋರ ಕೃತ್ಯ

Webdunia
ಶುಕ್ರವಾರ, 15 ಫೆಬ್ರವರಿ 2019 (09:32 IST)
ಚೆನ್ನೈ : ಒಂದೇ ಹುಡುಗಿಗೆ ಪ್ರಪೋಸ್ ಮಾಡುವ ವಿಚಾರದಲ್ಲಿ ಸ್ನೇಹಿತರೊಬ್ಬರು ಜಗಳವಾಡಿ ಚಾಕು ಇರಿದಿರುವ ಘಟನೆ ತಮಿಳುನಾಡಿನ ಇಂಡಿಯನ್ ಇನ್‍ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಮದ್ರಾಸ್ ಕ್ಯಾಂಪಸ್ ನಲ್ಲಿ ನಡೆದಿದೆ.


ಪ್ರಮೋದ್ ಕೌಶಿಕ್ ಹಲ್ಲೆಗೊಳಗಾದ ವಿದ್ಯಾರ್ಥಿ. ಮನೋಜ್ ಸ್ನೇಹಿತನಿಗೆ ಚಾಕು ಇರಿದ ವಿದ್ಯಾರ್ಥಿ. ಇಬ್ಬರು ಮೂಲತಃ ಹರಿಯಾಣದವರಾಗಿದ್ದು, ಎಮ್‍ ಟೆಕ್ ವ್ಯಾಸಂಗ ಮಾಡುತ್ತಿದ್ದರು. ಇವರಿಬ್ಬರು ಒಂದೇ ಹುಡುಗಿಯನ್ನು ಪ್ರೀತಿಸುತ್ತಿದ್ದ ಕಾರಣ ಪ್ರೇಮಿಗಳ ದಿನವಾದ ನಿನ್ನೆ ತಮ್ಮ ಹುಡುಗಿಗೆ ಪ್ರಪೋಸ್ ಮಾಡುವ ವಿಚಾರದಲ್ಲಿ ಇಬ್ಬರ ನಡುವೆ ಗಲಾಟೆ ನಡೆದಿದೆ. ಗಲಾಟೆ ತಾರಕ್ಕೇರಿದ್ದು, ಕೋಪಗೊಂಡ ಮನೋಜ್ ಚಾಕುವಿನಿಂದ ಕೌಶಿಕ್ ಗೆ ಇರಿದಿದ್ದಾನೆ.


ತಕ್ಷಣ ಹಲ್ಲೆಗೊಳಗಾದ ಕೌಶಿಕ್ ನನ್ನು ಅಲ್ಲಿದ್ದ ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಬಂದು ವಿಚಾರಣೆ ನಡೆಸಿ ಪ್ರಕರಣವನ್ನು ದಾಖಲಿಸಿಕೊಂಡಿದ್ದು, ಘಟನೆಯ ಬಗ್ಗೆ ತನಿಖೆ ನಡೆಸಲು  ಆರೋಪಿ ಮನೋಜ್ ನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಧಾನಸೌಧದ ಎದುರು ಕಿತ್ತಾಟ, 11ಮಂದಿ ಅರೆಸ್ಟ್‌

ತಿರುಮಲ ಲಡ್ಡು ಕಲಬೆರಕೆ ಪ್ರಕರಣ, ಮತ್ತೊಂದು ಬೆಚ್ಚಿಬೀಳಿಸುವ ಅಂಶ

ಕಾಂಗ್ರೆಸ್ ಎರಡೂವರೆ ವರ್ಷ ಪೂರೈಸಿದ್ದೇ ಸಾಧನೆ: ವಿಜಯೇಂದ್ರ

ಸಿದ್ದರಾಮಯ್ಯ ಸಿಎಂ ಸ್ಥಾನ ಬಿಟ್ಟುಕೊಡಲ್ಲ, ಡಿಕೆಶಿ ಆ ಸ್ಥಾನದಲ್ಲಿ ಮುಂದುವರೆಯಲು ಬಿಡಲ್ಲ: ಪ್ರಹ್ಲಾದ್ ಜೋಶಿ

ರೈಲಿನ ಎಸಿ ಕೋಚ್‌ನಲ್ಲಿ ಕೆಟಲ್‌ನಲ್ಲಿ ನೂಡಲ್ಸ್ ಮಾಡಿದ ಮಹಿಳೆಗೆ ಇದೀಗ ಢವಢವ

ಮುಂದಿನ ಸುದ್ದಿ
Show comments