Webdunia - Bharat's app for daily news and videos

Install App

ಮುಂಬೈನಲ್ಲಿ ಒಂದು ತಿಂಗಳ ಕಾಲ ಡ್ರೋನ್, ಪ್ಯಾರಾಗ್ಲೈಡರ್‌ ಹಾರಾಟಕ್ಕೆ ನಿಷೇಧ, ಕಾರಣ ಹೀಗಿದೆ

Sampriya
ಮಂಗಳವಾರ, 29 ಅಕ್ಟೋಬರ್ 2024 (18:31 IST)
Photo Courtesy X
ಮುಂಬೈ: ನಗರದಲ್ಲಿ ಹಾರುವ ಡ್ರೋನ್‌ಗಳು, ರಿಮೋಟ್ ಕಂಟ್ರೋಲ್ ಮೈಕ್ರೋಲೈಟ್ ಏರ್‌ಕ್ರಾಫ್ಟ್‌ಗಳು, ಪ್ಯಾರಾಗ್ಲೈಡರ್‌ಗಳು ಮತ್ತು ಹಾಟ್ ಏರ್ ಬಲೂನ್‌ಗಳ ಹಾರಾಟವನ್ನು ಒಂದು ತಿಂಗಳ ಕಾಲ ನಿಷೇಧ ಮಾಡಲಾಗಿದೆ.

ಪೊಲೀಸರು ಸೋಮವಾರ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯ (ಬಿಎನ್‌ಎಸ್‌ಎಸ್) ಸೆಕ್ಷನ್ 163 ರ ಅಡಿಯಲ್ಲಿ ನಿಷೇಧಿತ ಆದೇಶವನ್ನು ಹೊರಡಿಸಿದ್ದಾರೆ ಮತ್ತು ಇದು ಅಕ್ಟೋಬರ್ 31 ರಿಂದ ನವೆಂಬರ್ 29 ರವರೆಗೆ ಜಾರಿಯಲ್ಲಿರುತ್ತದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಆದೇಶದ ಪ್ರಕಾರ, ಭಯೋತ್ಪಾದಕರು ಮತ್ತು ಸಮಾಜವಿರೋಧಿಗಳು ಮುಂಬೈ ಪೊಲೀಸ್ ಕಮಿಷನರೇಟ್ ಪ್ರದೇಶದಲ್ಲಿ ವಿವಿಐಪಿಗಳನ್ನು ಗುರಿಯಾಗಿಸಲು, ಜನರ ಪ್ರಾಣಕ್ಕೆ ಅಪಾಯವನ್ನುಂಟುಮಾಡಲು ಮತ್ತು ಸಾರ್ವಜನಿಕ ಆಸ್ತಿಯನ್ನು ನಾಶಮಾಡಲು ತಮ್ಮ ದಾಳಿಯಲ್ಲಿ ಡ್ರೋನ್‌ಗಳು, ರಿಮೋಟ್-ನಿಯಂತ್ರಿತ ಮೈಕ್ರೋಲೈಟ್ ಏರ್‌ಕ್ರಾಫ್ಟ್ ಮತ್ತು ಪ್ಯಾರಾಗ್ಲೈಡರ್‌ಗಳನ್ನು ಬಳಸಬಹುದು. ಈ ಹಿನ್ನೆಲೆ ಇದೀಗ ಆದೇಶವನ್ನು ಹೊರಡಿಸಲಾಗಿದೆ.

ಹಾರುವ ವಸ್ತುಗಳ ಮೂಲಕ ಸಂಭವನೀಯ ವಿಧ್ವಂಸಕ ಕೃತ್ಯಗಳನ್ನು ತಡೆಯಲು ಕೆಲವು ನಿರ್ಬಂಧಗಳು ಅಗತ್ಯ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಇದನ್ನು ಪರಿಗಣಿಸಿ, ಪೊಲೀಸರ ವೈಮಾನಿಕ ಕಣ್ಗಾವಲು ಅಥವಾ ಡಿಸಿಪಿ (ಕಾರ್ಯಾಚರಣೆ) ಯ ನಿರ್ದಿಷ್ಟ ಅನುಮತಿಯನ್ನು ಹೊರತುಪಡಿಸಿ ಡ್ರೋನ್‌ಗಳು, ರಿಮೋಟ್-ನಿಯಂತ್ರಿತ ಮೈಕ್ರೋಲೈಟ್ ಏರ್‌ಕ್ರಾಫ್ಟ್ ಮತ್ತು ಪ್ಯಾರಾಗ್ಲೈಡರ್‌ಗಳ ಹಾರಾಟ ಚಟುವಟಿಕೆಗಳನ್ನು ಮುಂಬೈ ಪೊಲೀಸರ ವ್ಯಾಪ್ತಿಯಲ್ಲಿ ಅನುಮತಿಸಲಾಗುವುದಿಲ್ಲ.

ಉಲ್ಲಂಘಿಸುವವರಿಗೆ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 223 (ಸಾರ್ವಜನಿಕ ಸೇವಕ ನೀಡಿದ ಆದೇಶದ ಉಲ್ಲಂಘನೆ) ಅಡಿಯಲ್ಲಿ ಶಿಕ್ಷೆ ವಿಧಿಸಲಾಗುತ್ತದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

288 ಸದಸ್ಯ ಬಲದ ಮಹಾರಾಷ್ಟ್ರ ವಿಧಾನಸಭೆಗೆ ನವೆಂಬರ್‌ 20ರಂದು ಒಂದೇ ಹಂತದಲ್ಲಿ ಚುನಾವಣೆ ನಿಗದಿಯಾಗಿದೆ. 23ರಂದು ಫಲಿತಾಂಶ ಹೊರಬೀಳಲಿದೆ. ಜತೆಗೆ, ನವೆಂಬರ್ 26ರಂದು (26‌‌‌‌/11) ಮುಂಬೈಯಲ್ಲಿ ನಡೆದಿದ್ದ ಭಯೋತ್ಪಾದಕ ದಾಳಿಗೆ 16 ವರ್ಷ ತುಂಬಲಿದೆ. ಈ ಹಿನ್ನೆಲೆಯಲ್ಲಿ ಮುಂಬೈನಗರ ಬಿಗಿ ಪೊಲೀಸ್ ಭದ್ರತೆಗೆ ಸಾಕ್ಷಿಯಾಗಲಿದೆ ಎಂದು ವಿಶ್ಲೇಷಿಸಲಾಗಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳದಲ್ಲಿ ಎರಡನೇ ದಿನ ಹುಡುಕಾಡುತ್ತಿರುವ ಎಸ್ಐಟಿ ತಂಡಕ್ಕೆ ಸಿಕ್ಕಿದ್ದೇನು

ಧರ್ಮಸ್ಥಳ: 6 ಅಡಿ ಅಗೆದರೂ ಸಿಗದ ಕಳೆಬರಹ, ಕಾರ್ಯಚರಣೆಯಲ್ಲಿ ಬಿಗ್‌ಟ್ವಿಸ್ಟ್‌

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ತೀರ್ಪಿಗಾಗಿ ಕಾಯುತ್ತಿದ್ದ ಪ್ರಜ್ವಲ್ ರೇವಣ್ಣಗೆ ಶಾಕ್: ಕೋರ್ಟ್ ಹೇಳಿದ್ದೇನು

ಧರ್ಮಸ್ಥಳ ಕೇಸ್: ಪೊಲೀಸರಿಗೂ ಸಂಕಷ್ಟ ತಂದಿಟ್ಟ ಎಸ್ಐಟಿ ಆರ್ಡರ್

ಮುಂದಿನ ಸುದ್ದಿ
Show comments