ನವದೆಹಲಿ : ಒಡಿಶಾ ರೈಲು ದುರಂತಕ್ಕೆ ಕಾರಣರಾದವರನ್ನು ಯಾವುದೇ ಕಾರಣಕ್ಕೂ ಸುಮ್ಮನೆ ಬಿಡುವುದಿಲ್ಲ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಸ್ಪಷ್ಟ ಸಂದೇಶ ರವಾನಿಸಿದ್ದಾರೆ.
ರೈಲು ಅಪಘಾತದಲ್ಲಿ ಗಾಯಗೊಂಡ ಪ್ರಯಾಣಿಕರು ಚಿಕಿತ್ಸೆ ಪಡೆಯುತ್ತಿರುವ ಆಸ್ಪತ್ರೆಗೆ ಭೇಟಿದ ನಂತರ ಮಾತನಾಡಿದ ಪ್ರಧಾನಿ ಮೋದಿ, ಇದೊಂದು ನೋವಿನ
ಘಟನೆ. ಗಾಯಾಳುಗಳ ಚಿಕಿತ್ಸೆಗೆ ಸರ್ಕಾರ ನೆರವು ನೀಡಲಿದೆ. ಇದೊಂದು ಗಂಭೀರ ಘಟನೆಯಾಗಿದ್ದು, ಪ್ರತಿಯೊಂದು ಕೋನದಿಂದ ತನಿಖೆಗೆ ಸೂಚನೆ ನೀಡಲಾಗಿದೆ. ತಪ್ಪಿತಸ್ಥರೆಂದು ಕಂಡುಬಂದವರಿಗೆ ಕಠಿಣ ಶಿಕ್ಷೆ ವಿಧಿಸಲಾಗುವುದು. ರೈಲ್ವೆ ಹಳಿಗಳ ದುರಸ್ತಿ ಕಾರ್ಯ ನಡೆಯುತ್ತಿದೆ. ನಾನು ಗಾಯಗೊಂಡ ಸಂತ್ರಸ್ತರನ್ನು ಭೇಟಿ ಮಾಡಿದ್ದೇನೆ ಎಂದು ತಿಳಿಸಿದ್ದಾರೆ.