ನವದೆಹಲಿ : ಆ್ಯಪ್ ಅಧಿಕಾರಕ್ಕೆ ಬಂದರೆ ಉಚಿತ ವಿದ್ಯುತ್, ಮಹಿಳೆಯರಿಗೆ ತಿಂಗಳಿಗೆ 1 ಸಾವಿರ ರೂಪಾಯಿ ನೀಡಲಾಗುತ್ತದೆ.
ಮತದಾರರಿಗೆ ಪಂಜಾಬ್ ರಾಜ್ಯ ವಿಧಾನಸಭಾ ಚುನಾವಣೆಗೂ ಮುನ್ನ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಭರವಸೆ ನೀಡಿದ್ದಾರೆ.
ಮೊಹಾಲಿಯಲ್ಲಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಮುಂದಿನ ಐದು ವರ್ಷಗಳಲ್ಲಿ ಪಂಜಾಬ್ ರಾಜ್ಯವನ್ನು ಸಮೃದ್ಧಗೊಳಿಸಲಾಗುವುದು. ಎಲ್ಲರಿಗೂ ಉದ್ಯೋಗ ಅವಕಾಶವನ್ನು ನೀಡಿತ್ತೇವೆ.
ಪಂಜಾಬ್ನಲ್ಲಿ ಎಎಪಿ ಅಧಿಕಾರಕ್ಕೆ ಬಂದರೆ 18 ವರ್ಷಕ್ಕಿಂತ ಮೇಲ್ಪಟ್ಟ ಪ್ರತಿ ಮಹಿಳೆಗೆ ತಿಂಗಳಿಗೆ 1 ಸಾವಿರ ರೂಪಾಯಿ ನೀಡುವುದಾಗಿ ಹೇಳಿದ್ದಾರೆ.