Daily Horoscope

Select Your Language

Notifications

webdunia
webdunia
webdunia
webdunia

ಸಿಎಂ ಅರವಿಂದ್‌ ಕೇಜ್ರಿವಾಲ್‌ಗೆ ಬೆದರಿಕೆ ಬರಹ: ಯುವಕನ ಬಂಧನ

Aravind
ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ ಬೆದರಿಕೆ ಹಾಕಿದ ಬರಹಗಳನ್ನು ಹಂಚಿದ ಯುವಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬಂಧಿತ ಆರೋಪಿಯನ್ನು 33 ವರ್ಷದ ಅಂಕಿತ್ ಗೋಯಲ್ ಎಂದು ಗುರುತಿಸಲಾಗಿದೆ.

ಮೆಟ್ರೊ ರೈಲುಗಳ ಕೋಚ್‌ಗಳು ಹಾಗೂ ಸೈನ್‌ಬೋರ್ಡ್‌ಗಳಲ್ಲಿ ಗೀಚುತ್ತಿದ್ದ ಯುವಕನ ದೃಶ್ಯಗಳು ಸಿಸಿಟಿವಿ ವಿಡಿಯೊದಲ್ಲಿ ಸೆರೆಯಾಗಿದೆ.


ಅಂಕಿತ್ ಗೋಯಲ್ ತನ್ನ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಗೀಚುಬರಹಗಳ ಫೋಟೊಗಳನ್ನು ಹಂಚಿಕೊಂಡಿದ್ದ. ಆತನೇ ಗೀಚುಬರಹ ಬರೆದಿರಬಹುದೆಂದು ಪೊಲೀಸರು ಶಂಕಿಸಿದ್ದರು.

ಘಟನೆ ಸಂಬಂಧ ಎಫ್‌ಐಆರ್ ದಾಖಲಿಸಿಕೊಂಡಿದ್ದ ಪೊಲೀಸರು ಆರೋಪಿ ಪತ್ತೆಯಚ್ಚಿ ಬಂಧಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ರಾಜಕಾಲುವೆ ಒತ್ತುವರಿ ಮಾಡಿಕೊಂಡ ಪ್ರಭಾವಿಗಳಿಗೆ ಸಿಎಂ ಸಿದ್ಧರಾಮಯ್ಯ ಖಡಕ್‌