Webdunia - Bharat's app for daily news and videos

Install App

ಬೆದರಿಕೆಯೊಡ್ಡುವುದರಿಂದ ಅಯ್ಯಪ್ಪ ಸಂಗಮ ತಡೆಯಲು ಸಾಧ್ಯವಿಲ್ಲ: ಪಿಣರಾಯಿ ಕೌಂಟರ್‌

Sampriya
ಬುಧವಾರ, 27 ಆಗಸ್ಟ್ 2025 (17:19 IST)
ತಿರುವನಂತಪುರ: ಯೋಜನೆಯಂತೆ ಜಾಗತಿಕ ಅಯ್ಯಪ್ಪ ಸಂಗಮ ಕಾರ್ಯಕ್ರಮ ನಡೆಯಲಿದ್ದು,  ಬೆದರಿಕೆಯೊಡ್ಡುವ ಮೂಲಕ ಅದನ್ನು ತಡೆಯಲು ಸಾಧ್ಯವಿಲ್ಲ ಎಂದು ಕೇರಳ ಸಿಎಂ ಪಿಣರಾಯಿ ವಿಜಯನ್ ಬಿಜೆಪಿಗೆ ತಿರುಗೇಟು ನೀಡಿದರು.

ಹಿಂದೂಗಳನ್ನು ಅವಮಾನಿಸಿದ್ದಕ್ಕಾಗಿ ಕೇರಳ ಸಿಎಂ ಹಾಗೂ ತಮಿಳುನಾಡು ಸಿಎಂ ಎಂ.ಕೆ. ಸ್ಟಾಲಿನ್ ಕ್ಷಮೆಯಾಚಿಸದ್ದಲ್ಲಿ ಅಯ್ಯಪ್ಪ ಭಕ್ತರ ಕಾರ್ಯಕ್ರಮದಲ್ಲಿ ಭಾಗವಹಿಸುವುದನ್ನು ತಡೆಯುವುದಾಗಿ ಬಿಜೆಪಿ ಕೇರಳ ಘಟಕದ ಅಧ್ಯಕ್ಷ ರಾಜೀವ್ ಚಂದ್ರಶೇಖರ್ ಇತ್ತೀಚೆಗೆ ಎಚ್ಚರಿಕೆ ನೀಡಿದ್ದರು.

ಶಬರಿಮಲೆಯ ಅಯ್ಯಪ್ಪ ದೇಗುಲಕ್ಕೆ ಮಹಿಳೆಯರ ಪ್ರವೇಶವನ್ನು ವಿರೋಧಿಸಿದ್ದರ ವಿರುದ್ಧ ದಾಖಲಿಸಿದ್ದ ಪ್ರಕರಣರನ್ನು ರದ್ದುಗೊಳಿಸುವಂತೆಯೂ ಚಂದ್ರಶೇಖರ್ ಒತ್ತಾಯಿಸಿದ್ದರು.

ಈ ಸಂಬಂಧ ಕೇರಳ ಸಿಎಂ ಪಿಣರಾಯಿ ಪ್ರತಿಕ್ರಿಯಿಸಿ, ತಿರುವಾಂಕೂರು ದೇವಸ್ವಂ ಮಂಡಳಿ (ಟಿಡಿಬಿ) ತನ್ನ 75ನೇ ವಾರ್ಷಿಕೋತ್ಸವದ ಅಂಗವಾಗಿ ಈ ಕಾರ್ಯಕ್ರಮವನ್ನು ಆಯೋಜಿಸುತ್ತಿದ್ದು, ರಾಜ್ಯ ಸರ್ಕಾರವು ಸಾಧ್ಯವಿರುವ ಎಲ್ಲ ಸಹಾಯವನ್ನು ಮಾಡುತ್ತಿದೆ ಎಂದು ಹೇಳಿದ್ದಾರೆ.

'ಇದು ಸರ್ಕಾರಿ ಕಾರ್ಯಕ್ರಮವಲ್ಲ. ಆದ್ದರಿಂದ ಕಾರ್ಯಕ್ರಮ ಸುಗಮವಾಗಿ ನಡೆಯಲಿ. ಅಲ್ಲದೆ ಕಾರ್ಯಕ್ರಮಕ್ಕೆ ಯಾರೂ ಸಹ ಬೆದರಿಕೆ ಹಾಕುವ ಅಗತ್ಯವಿಲ್ಲ. ಈ ಕಾರ್ಯಕ್ರಮವನ್ನು ತಡೆಯಲು ಸಾಧ್ಯವಿಲ್ಲ' ಎಂದಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನರೇಂದ್ರ ಮೋದಿ ಮತ್ತು ದೇವೇಗೌಡರದು ಜನ್ಮಜನ್ಮದ ಅನುಬಂಧ: ವಿಜಯೇಂದ್ರ ಬಣ್ಣನೆ

ಚಿನ್ನಯ್ಯ ತಂದ ಬುರುಡೆ ಮೂಲ ತನಿಖೆ: ಸೌಜನ್ಯ ಮಾವ ವಿಠಲ್‌ ಗೌಡಗೆ ಡವಡವ

ಮುಂದೊಂದು ದಿನ ಭಾರತ, ಪಾಕ್ ಆಗಲಿದೆ: ಹಿಂದೂಗಳಿಗೆ ಎಚ್ಚರಿಕೆ ನೀಡಿದ ಕಲ್ಲಡ್ಕ ಭಟ್

ಎನ್‌ಡಿಎ ಸಂಸದರಿಗೆ ಮೋದಿ ನಿವಾಸದಲ್ಲಿ ಆಯೋಜಿಸಿದ್ದ ಔತಣಕೂಟ ದಿಢೀರ್ ರದ್ದು, ಕಾರಣ ಏನು ಗೊತ್ತಾ

ಒಳಮೀಸಲಾತಿ ವಿಚಾರವಾಗಿ ಸೆ10 ರಿಂದ ಬಿಜೆಪಿ ಹೋರಾಟ

ಮುಂದಿನ ಸುದ್ದಿ
Show comments