Select Your Language

Notifications

webdunia
webdunia
webdunia
webdunia

ಉಗ್ರರ ದಾಳಿಗೆ ಮೂವರು ಯೋಧರು ಹುತಾತ್ಮ

Three Army jawans
ಶ್ರೀನಗರ , ಗುರುವಾರ, 23 ಫೆಬ್ರವರಿ 2017 (09:10 IST)
ಜಮ್ಮು ಮತ್ತು ಕಾಶ್ಮೀರದ ಶೋಪಿಯಾರ್‌ನಲ್ಲಿ ಉಗ್ರರು ದಾಳಿ ನಡೆಸಿದ್ದು ಮೂವರು ಯೋಧರು ಹುತಾತ್ಮರಾಗಿದ್ದಾರೆ. ಭಾರತೀಯ ಯೋಧರು ನಡೆಸಿದ ಪ್ರತಿದಾಳಿಯಲ್ಲಿ ಓರ್ವ ಮಹಿಳೆ ಮೃತಪಟ್ಟಿದ್ದಾಳೆ ಎಂದು ತಿಳಿದು ಬಂದಿದೆ.
ಘಟನೆಯಲ್ಲಿ ಇತರ 6 ಮಂದಿ ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
 
ಕುಂಗೂ ಗ್ರಾಮದಲ್ಲಿ ಶೋಧ ಕಾರ್ಯಾಚರಣೆಯನ್ನು ನಡೆಸಿ ವಾಪಸ್ಸಾಗುತ್ತಿದ್ದ ಸೇನಾ ಗಸ್ತುವಾಹನವನ್ನು ಗುರಿಯಾಗಿಸಿ ಉಗ್ರರು ದಾಳಿ ನಡೆಸಿದ್ದು, ಅವರ ವಿರುದ್ಧ ಕಾರ್ಯಾಚರಣೆಯನ್ನು ಮುಂದುವರೆಸಲಾಗಿದೆ.
 
ಕಳೆದ ಮೂರು ವಾರಗಳಲ್ಲಿ ನಡೆಸಲಾದ ನಾಲ್ಕನೇ ಎನ್‌ಕೌಂಟರ್ ಇದಾಗಿದೆ. 
 
ಸ್ಥಳದಲ್ಲಿ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಚಾಮರಾಜೇಶ್ವರ ರಥಕ್ಕೆ ಬೆಂಕಿ: ಶಂಕಿತ ಆರೋಪಿ ಬಂಧನ