Select Your Language

Notifications

webdunia
webdunia
webdunia
webdunia

ಟಾಲಿವುಡ್‌ನಲ್ಲಿ ಅವಕಾಶ ಕೊಡಿಸುವ ಆಮಿಷ; ಅಪ್ರಾಪ್ತೆ ಮೇಲೆ ಗ್ಯಾಂಗ್ ರೇಪ್

Three arrest
ಹೈದರಾಬಾದ್ , ಶುಕ್ರವಾರ, 30 ಡಿಸೆಂಬರ್ 2016 (11:33 IST)
ಸಿನಿಮಾಗಳಲ್ಲಿ ಅವಕಾಶ ಕೊಡಿಸುವ ಆಮಿಷ ಒಡ್ಡಿ 15 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿರುವ ಹೇಯ ಕೃತ್ಯ ಹೈದರಾಬಾದಿನಲ್ಲಿ ಬೆಳಕಿಗೆ ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲುಗು ಚಿತ್ರರಂಗದಲ್ಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿರುವ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. 
ಆರೋಪಿಗಳನ್ನು ಗಣೇಶ್, ಅಕ್ಬರ್ ಮತ್ತು ವೆಂಕಾ ರೆಡ್ಡಿ ಎಂದು ಗುರುತಿಸಲಾಗಿದ್ದು, ಪೀಡಿತೆ ಮತ್ತಿಬ್ಬರ ಜತೆ ಈ ಮೂವರು ತನ್ನ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದಾರೆಂದು ಬಂಜಾರಾ ಹಿಲ್ಸ್ ಪೊಲೀಸ್ ಠಾಣೆಯಲ್ಲಿ ನಿನ್ನೆ ದೂರು ನೀಡಿದ್ದಳು. ಈ ದೂರಿನ ಆಧಾರದ ಮೇಲೆ ಈ ಮೂವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. 
 
9ನೇ ತರಗತಿಗೆ ಶಾಲೆ ಬಿಟ್ಟಿದ್ದ ಬಾಲಕಿಗೆ ಡಾನ್ಸ್‌ನಲ್ಲಿ ಅತೀವ ಆಸಕ್ತಿ ಇತ್ತು. ಹೇಗೋ ಈ ಮೂವರು ಆರೋಪಿಗಳ ಸಂಪರ್ಕಕ್ಕೆ ಸಿಕ್ಕ ಆಕೆಗೆ ಸಿನಿಮಾಗಳಲ್ಲಿ ನೃತ್ಯ ಮಾಡುವ ಅವಕಾಶ ಕೊಡಿಸುವುದಾಗಿ ಪುಸಲಾಯಿಸಿದ್ದಾರೆ. ಅಮಾಯಕ ಬಾಲಕಿ ಅವರನ್ನು ನಂಬಿ ಜತೆಗೆ ಹೋಗಿದ್ದಾಳೆ. ಆದರೆ ಆಕೆಯ ಮುಗ್ಧತೆಯನ್ನು ಬಳಸಿಕೊಂಡ ಅವರು ನಿರಂತರವಾಗಿ ಲೈಂಗಿಕ ದೌರ್ಜನ್ಯವೆಸಗಿದ್ದಾರೆ ಎಂದು ತಿಳಿದು ಬಂದಿದೆ. 
 
ಮೂವರು ಆರೋಪಿಗಳನ್ನು ಬಂಧಿಸಲಾಗಿದ್ದು, ಇನ್ನುಳಿದ ಇಬ್ಬರು ಆರೋಪಿಗಳಿಗಾಗಿ ಪೊಲೀಸರು ಶೋಧ ನಡೆಸಿದ್ದಾರೆ. 
 
ಬಾಲಕಿ ಡಿಸೆಂಬರ್ 3 ರಿಂದ ಮನೆಯಿಂದ ನಾಪತ್ತೆಯಾಗಿದ್ದಳು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಸಾವಿರಪಟ್ಟು ಹೆಚ್ಚಾದ ಮೊಬಿಕ್ವಿಕ್ ರಿಜಿಸ್ಟ್ರೇಷನ್