ಬ್ರೇಕ್ ಫೇಲ್ ಆದ ಬಸ್ ಹರಿದು ಮೂವರು ಸ್ಥಳದಲ್ಲೇ ಸಾವು

Webdunia
ಶುಕ್ರವಾರ, 27 ಅಕ್ಟೋಬರ್ 2017 (17:53 IST)
ಆಂಧ್ರ ಪ್ರದೇಶ: ಬ್ರೇಕ್ ಫೇಲ್ ಆದ ಸಾರಿಗೆ ಬಸ್ ಜನರ ಮೇಲೆ ಹರಿದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ವಿಜಯವಾಡದ ಅಜಿತ್‌ಸಿಂಗ್ ನಗರದಲ್ಲಿ ನಡೆದಿದೆ.

ಮೃತರನ್ನು ಮೈಲಾವರಂ ಮೂಲದ ಖುರ್ಷಿದ್ (32), ಅಶ್ರತ್(12) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದ್ದು, ಗಾಯಾಳುಗಳನ್ನು ಏಲೂರು ರಸ್ತೆಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಪಘಾತ ಹಿನ್ನೆಲೆಯಲ್ಲಿ ಕೋಪಗೊಂಡ ಮೃತರ ಸಂಬಂಧಿಕರು ಬಸ್ ಗೆ ಬೆಂಕಿ ಹಚ್ಚಿದ್ದು, ಪೊಲೀಸರು ಪರಿಸ್ಥಿತಿ ನಿಯಂತ್ರಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಓರ್ವ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬಸ್ ವಾಂಬೆ ಕಾಲೋನಿಯಿಂದ ಪಂಡಿತ್ ನೆಹರೂ ಬಸ್ ನಿಲ್ದಾಣಕ್ಕೆ ತೆರಳುತ್ತಿತ್ತು. ಈ ವೇಳೆ ಬುದಮೇರು ಫ್ಲೈ ಓವರ್ ಬಳಿ ಬಸ್ ಬ್ರೇಕ್ ಫೇಲ್ ಆಗಿದ್ದು, ಬೈಕ್, ಆಟೋರಿಕ್ಷಾ ಸೇರಿದಂತೆ ಹಲವು ವಾಹನಗಳಿಗೆ ಡಿಕ್ಕಿಹೊಡೆದಿದೆ. ಕೊನೆಗೆ ಮುಂದಿದ್ದ ಲಾರಿಯೊಂದರ ಚಾಲಕ ಲಾರಿಯನ್ನು ಬಸ್‌ ಗೆ ಅಡ್ಡ ನಿಲ್ಲಿಸಿದ್ದಾನೆ. ಇದರಿಂದ ಬಸ್ ಮತ್ತಷ್ಟು ಜನರ ಮೇಲೆ ಹರಿದು ಸಂಭವಿಸಬೇಕಾದ ಮತ್ತಷ್ಟು ಅನಾಹುತ ತಪ್ಪಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಬದಲಾವಣೆ ಸಾಧ್ಯನೇ ಇಲ್ಲ: ಬಸನಗೌಡ ಪಾಟೀಲ್

ಬಿಗ್ ಶಾಕ್‌, ಬಾವಿಗೆ ಹಾರಿ ಒಂದೇ ಕುಟುಂಬದ ನಾಲ್ವರು ಸಾವು

ದರೋಡೆಕೋರರ ಬೆಂಗಳೂರೇ, ಹಳ್ಳದ ಬೆಂಗಳೂರೇ, ಕಸದ ಬೆಂಗಳೂರೇ: ಆರ್.ಅಶೋಕ್

ಬಾಂಗ್ಲಾದೇಶದಲ್ಲಿ ಸಂಭವಿಸಿದ ಭೂಕಂಪಕ್ಕೆ ಕೋಲ್ಕತ್ತಾದಲ್ಲೂ ಶೇಕ್‌

ಮುನ್ಸೂಚನೆಯಂತೆ ಸಿಲಿಕಾನ್ ಸಿಟಿಗೆ ತಂಪೆರೆದ ವರುಣ

ಮುಂದಿನ ಸುದ್ದಿ
Show comments