Select Your Language

Notifications

webdunia
webdunia
webdunia
webdunia

ಚಂಡಮಾರುತಕ್ಕೆ ಮೂವರು ಬಲಿ: ಮನೆಗಳಿಗೆ ನುಗ್ಗಿದ ನೀರು, 100ಕ್ಕೂ ಹೆಚ್ಚು ಮಂದಿ ರಕ್ಷಣೆ

Fengal Cyclone

Sampriya

ಚೆನ್ನೈ , ಭಾನುವಾರ, 1 ಡಿಸೆಂಬರ್ 2024 (11:18 IST)
Photo Courtesy X
ಚೆನ್ನೈ: ಫೆಂಗಲ್‌ ಚಂಡಮಾರುತ ತಮಿಳುನಾಡಿಗೆ ಅಪ್ಪಳಿಸಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. 90 ಕಿಮೀ ವೇಗದಲ್ಲಿ ಗಾಳಿ ಬೀಸುತ್ತಿದ್ದು, ಚೆನ್ನೈ ಮತ್ತು ಇತರ ಪ್ರದೇಶಗಳಲ್ಲಿ ಭಾರಿ ಮಳೆಯಿಂದ ಆವಾಂತರ ಸೃಷ್ಟಿಸಿದೆ.

ಧಾರಾಕಾರ ಮಳೆಯಿಂದ ಹಲವು ಪ್ರದೇಶಗಳಲ್ಲಿ ಜಲಾವೃತ ಉಂಟಾಗಿದೆ. ಅಲ್ಲದೇ ವಿಮಾನ, ರೈಲು, ಬಸ್‌ ಸೇರಿದಂತೆ ಸಾರ್ವಜನಿಕ ಸಂಚಾರ ವ್ಯವಸ್ಥೆಯ ಮೇಲೆ ಪರಿಣಾಮ ಉಂಟುಮಾಡಿದೆ. ಚೆನ್ನೈ ಏರ್‌ಪೋರ್ಟ್‌ನಲ್ಲಿ ವಿಮಾನವೊಂದು ಲ್ಯಾಂಡಿಂಗ್‌ಗಾಗಿ ಪರದಾಡಿದ ಪ್ರಸಂಗವೂ ಕಂಡುಬಂದಿದೆ.

ಚೆನ್ನೈನಲ್ಲಿ ಸಂಭವಿಸಿದ ಮಳೆಯಿಂದಾಗಿ ವಿವಿಧೆಡೆ ಮೂವರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮೃತ ಮೂವರಲ್ಲಿ ಓಬ್ಬ ವಲಸೆ ಕಾರ್ಮಿಕರು. ಮತ್ತೊಬ್ಬರು ಎಟಿಎಂನಿಂದ ಹಣ ಡ್ರಾ ಮಾಡಲು ಹೋದಾಗ ಮೃತಪಟ್ಟಿದ್ದಾರೆ.

ಮಳೆಯ ಅವಾಂತರದಿಂದ ಹಲವೆಡೆ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಪುದುಚೇರಿಯ ಕೃಷ್ಣನಗರದ ಕೆಲವು ಪ್ರದೇಶಗಳಲ್ಲಿ 5 ಅಡಿಗಳಷ್ಟು ಎತ್ತರಕ್ಕೆ ನೀರು ಹರಿಯುತ್ತಿದ್ದು, ಸುಮಾರು 500 ಮನೆಗಳು ಜಲಾವೃತವಾಗಿವೆ. ಇದರಿಂದ ಎನ್‌ಡಿಆರ್‌ಎಫ್‌ ಹಾಗೂ ಸ್ಥಳೀಯ ರಕ್ಷಣಾ ಪಡೆಗಳೊಂದಿಗೆ ಭಾರತೀಯ ಸೇನೆ ಬೀಡುಬಿಟ್ಟಿದ್ದು, ರಕ್ಷಣಾ ಕಾರ್ಯದಲ್ಲಿ ತೊಡಗಿವೆ. ಈವರೆಗೆ ಭಾರತೀಯ ಸೇನೆ 100ಕ್ಕೂ ಹೆಚ್ಚು ಜನರನ್ನ ರಕ್ಷಣೆ ಮಾಡಿದೆ ಎಂದು ವರದಿ ಹೇಳಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಕರಾವಳಿಗೆ ಅಪ್ಪಳಿಸಿದ ಫೆಂಗಲ್ ಚಂಡಮಾರುತ: ತಮಿಳುನಾಡಿನಾದ್ಯಂತ ಬಿರುಗಾಳಿ ಸಹಿತ ಭಾರೀ ಮಳೆ