Webdunia - Bharat's app for daily news and videos

Install App

ಚಂಡಮಾರುತಕ್ಕೆ ಮೂವರು ಬಲಿ: ಮನೆಗಳಿಗೆ ನುಗ್ಗಿದ ನೀರು, 100ಕ್ಕೂ ಹೆಚ್ಚು ಮಂದಿ ರಕ್ಷಣೆ

Sampriya
ಭಾನುವಾರ, 1 ಡಿಸೆಂಬರ್ 2024 (11:18 IST)
Photo Courtesy X
ಚೆನ್ನೈ: ಫೆಂಗಲ್‌ ಚಂಡಮಾರುತ ತಮಿಳುನಾಡಿಗೆ ಅಪ್ಪಳಿಸಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. 90 ಕಿಮೀ ವೇಗದಲ್ಲಿ ಗಾಳಿ ಬೀಸುತ್ತಿದ್ದು, ಚೆನ್ನೈ ಮತ್ತು ಇತರ ಪ್ರದೇಶಗಳಲ್ಲಿ ಭಾರಿ ಮಳೆಯಿಂದ ಆವಾಂತರ ಸೃಷ್ಟಿಸಿದೆ.

ಧಾರಾಕಾರ ಮಳೆಯಿಂದ ಹಲವು ಪ್ರದೇಶಗಳಲ್ಲಿ ಜಲಾವೃತ ಉಂಟಾಗಿದೆ. ಅಲ್ಲದೇ ವಿಮಾನ, ರೈಲು, ಬಸ್‌ ಸೇರಿದಂತೆ ಸಾರ್ವಜನಿಕ ಸಂಚಾರ ವ್ಯವಸ್ಥೆಯ ಮೇಲೆ ಪರಿಣಾಮ ಉಂಟುಮಾಡಿದೆ. ಚೆನ್ನೈ ಏರ್‌ಪೋರ್ಟ್‌ನಲ್ಲಿ ವಿಮಾನವೊಂದು ಲ್ಯಾಂಡಿಂಗ್‌ಗಾಗಿ ಪರದಾಡಿದ ಪ್ರಸಂಗವೂ ಕಂಡುಬಂದಿದೆ.

ಚೆನ್ನೈನಲ್ಲಿ ಸಂಭವಿಸಿದ ಮಳೆಯಿಂದಾಗಿ ವಿವಿಧೆಡೆ ಮೂವರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮೃತ ಮೂವರಲ್ಲಿ ಓಬ್ಬ ವಲಸೆ ಕಾರ್ಮಿಕರು. ಮತ್ತೊಬ್ಬರು ಎಟಿಎಂನಿಂದ ಹಣ ಡ್ರಾ ಮಾಡಲು ಹೋದಾಗ ಮೃತಪಟ್ಟಿದ್ದಾರೆ.

ಮಳೆಯ ಅವಾಂತರದಿಂದ ಹಲವೆಡೆ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಪುದುಚೇರಿಯ ಕೃಷ್ಣನಗರದ ಕೆಲವು ಪ್ರದೇಶಗಳಲ್ಲಿ 5 ಅಡಿಗಳಷ್ಟು ಎತ್ತರಕ್ಕೆ ನೀರು ಹರಿಯುತ್ತಿದ್ದು, ಸುಮಾರು 500 ಮನೆಗಳು ಜಲಾವೃತವಾಗಿವೆ. ಇದರಿಂದ ಎನ್‌ಡಿಆರ್‌ಎಫ್‌ ಹಾಗೂ ಸ್ಥಳೀಯ ರಕ್ಷಣಾ ಪಡೆಗಳೊಂದಿಗೆ ಭಾರತೀಯ ಸೇನೆ ಬೀಡುಬಿಟ್ಟಿದ್ದು, ರಕ್ಷಣಾ ಕಾರ್ಯದಲ್ಲಿ ತೊಡಗಿವೆ. ಈವರೆಗೆ ಭಾರತೀಯ ಸೇನೆ 100ಕ್ಕೂ ಹೆಚ್ಚು ಜನರನ್ನ ರಕ್ಷಣೆ ಮಾಡಿದೆ ಎಂದು ವರದಿ ಹೇಳಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments