Webdunia - Bharat's app for daily news and videos

Install App

ಸಾಮೂಹಿಕ ಅತ್ಯಾಚಾರ: ಮೂವರ ಬಂಧನ

Webdunia
ಸೋಮವಾರ, 5 ಅಕ್ಟೋಬರ್ 2015 (15:00 IST)
ಹದಿಹರೆಯದ ಯುವತಿಯೋರ್ವಳ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಆರೋಪದ ಮೇಲೆ ಮೂವರು ಯುವಕರನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. 


ಆರೋಪಿಗಳನ್ನು ಸಲ್ಮಾನ್, ಶಾಬಾಜ್ ಮತ್ತು ಇರ್ಫಾನ್ ಎಂದು ಗುರುತಿಸಲಾಗಿದೆ ಎಂದು ಚೆಂಬೂರ್ ಠಾಣೆಯ ಹಿರಿಯ ಪೊಲೀಸ್ ಅಧಿಕಾರಿ  ದಿಲೀಪ್ ರೌತ್ ತಿಳಿಸಿದ್ದಾರೆ. 
 
ನಿನ್ನೆ ಸಂಜೆ ಚೆಂಬೂರ್‌ನ ಆರ್‌ಸಿಎಫ್ ಪ್ರದೇಶದಿಂದ ಆರೋಪಿಗಳನ್ನು ಬಂಧಿಸಲಾಗಿದ್ದು, ಮುಖ್ಯ ಆರೋಪಿಯನ್ನು ಸಲ್ಮಾನ್ ಎಂದು ಗುರುತಿಸಲಾಗಿದೆ. ಆತ ಪೀಡಿತೆಗೆ ಪರಿಚಿತನಾಗಿದ್ದು ಅಕೆಯನ್ನು ಪುಸಲಾಯಿಸಿ ಶಾಬಾಜ್ ಮನೆಗೆ ಕರೆದೊಯ್ದಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಅಲ್ಲಿ ಆಕೆಯ ಮೇಲೆ ಅತ್ಯಾಚಾರ ಎಸಗಿದ ಕಾಮುಕರು  ಈ ವಿಷಯವನ್ನು ಯಾರಿಗಾದರೂ ತಿಳಿಸಿದರೆ ನಿನ್ನನ್ನು ಸುಮ್ಮನೆ ಬಿಡಲಾರೆವು ಎಂದು ಬೆದರಿಕೆ ಒಡ್ಡಿದ್ದರು ಎಂದು ಆಕೆಯ ಕುಟುಂಬದವರು ನೀಡಿರುವ ದೂರಿನಲ್ಲಿ ಹೇಳಲಾಗಿದೆ. 
 
ಘಟನೆಯ ನಂತರ ಮೂರನೆಯ ಆರೋಪಿ ಇರ್ಫಾನ್ ಸೇರಿದಂತೆ ಮೂವರು ಸೇರಿ  ಆಕೆಗೆ ಬೆದರಿಕೆ ಒಡ್ಡಲು ಆರಂಭಿಸಿದ್ದಾರೆ. ಅವರ ಉಪಟಳದಿಂದ ಬೇಸತ್ತು ಹೋದ ಯುವತಿ ತನ್ನ ತಾಯಿಗೆ ಎಲ್ಲ ವಿಷಯವನ್ನು ತಿಳಿಸಿ ಪೊಲೀಸರಲ್ಲಿ ದೂರು ನೀಡಿದ್ದಾರೆ.
 
ಆಕೆ ನೀಡಿರುವ ದೂರಿನ ಆಧಾರದ ಮೇಲೆ ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments