Publish Date: Mon, 30 May 2022 (11:44 IST)
Updated Date: Mon, 30 May 2022 (11:48 IST)
ನವದೆಹಲಿ : ಬಿಜೆಪಿ ಟಿಕೆಟ್ ಘೋಷಣೆ ಬೆನ್ನಲ್ಲೇ ಕಾಂಗ್ರೆಸ್ ನಿಂದಲೂ ರಾಜ್ಯಸಭಾ ಚುನಾವಣೆಗೆ ಟಿಕೆಟ್ ಘೋಷಣೆ ಮಾಡಲಾಗಿದೆ.
ಕೈ ಪಾಳಯದಿಂದ ಜೈರಾಮ್ ರಮೇಶ್ ಮುಂದುವರಿಸಲು ಹೈಕಮಾಂಡ್ ನಿರ್ಧಾರ ಮಾಡಿದೆ. ಕಾಂಗ್ರೆಸ್ ನಿಂದ ಜೈರಾಮ್ ರಮೇಶ್ ಅಂತಿಮವಾದ್ರೆ, ಬಿಜೆಪಿಯಿಂದ ನಿರ್ಮಲಾ ಸೀತರಾಮನ್ ಮತ್ತು ನಟ ಜಗ್ಗೇಶ್ ಅಂತಿಮ ಹೆಸರು ಘೋಷಣೆ ಮಾಡಲಾಗಿದೆ.
ರಾಜ್ಯದ ನಾಲ್ಕು ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು ಮೂವರು ಅಭ್ಯರ್ಥಿಗಳ ಹೆಸರು ಅಂತಿಮವಾಗಿದೆ. ನಾಲ್ಕನೇ ಸ್ಥಾನಕ್ಕೆ ಅಭ್ಯರ್ಥಿಯ ಯಾರು ಅನ್ನೋದು ಇನ್ನು ಕುತೂಹಲವಾಗಿಯೇ ಉಳಿದಿದೆ.
ಒಟ್ಟಿನಲ್ಲಿ ಜೂನ್ 10ರಂದು ಕರ್ನಾಟಕ ಸೇರಿದಂತೆ 15 ರಾಜ್ಯಗಳಲ್ಲಿನ 57 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಉತ್ತರ ಪ್ರದೇಶವೊಂದರಲ್ಲೇ 11 ಸ್ಥಾನಗಳಿವೆ.
ತಮಿಳುನಾಡು ಮತ್ತು ಮಹಾರಾಷ್ಟ್ರದಲ್ಲಿ 6 ಸ್ಥಾನಗಳಿವೆ. ಬಿಹಾರದಲ್ಲಿ 5, ಕರ್ನಾಟಕ, ಆಂಧ್ರಪ್ರದೇಶ ಮತ್ತು ರಾಜಸ್ಥಾನದಲ್ಲಿ 4 ಸ್ಥಾನಗಳು ತೆರವಾಗಿದ್ದು, ಚುನಾವಣೆ ನಡೆಯಲಿದೆ. ಈ 57 ಸ್ಥಾನಗಳ ಪೈಕಿ ಕಾಂಗ್ರೆಸ್ 8 ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆಯಲ್ಲಿದೆ.