Select Your Language

Notifications

webdunia
webdunia
webdunia
webdunia

ಸ್ವಾತಂತ್ರ್ಯೋತ್ಸವಕ್ಕೆ ಕೆಂಪು ಕೋಟೆಯಲ್ಲಿ ಬಿಗಿ ಭದ್ರತೆ

ಸ್ವಾತಂತ್ರ್ಯೋತ್ಸವಕ್ಕೆ ಕೆಂಪು ಕೋಟೆಯಲ್ಲಿ ಬಿಗಿ ಭದ್ರತೆ
ನವದೆಹಲಿ , ಸೋಮವಾರ, 14 ಆಗಸ್ಟ್ 2023 (12:30 IST)
ನವದೆಹಲಿ : 77ನೇ ಸ್ವಾತಂತ್ರ್ಯೋತ್ಸವ ಹಿನ್ನೆಲೆಯಲ್ಲಿ ದೆಹಲಿಯ ಕೆಂಪು ಕೋಟೆ ಸುತ್ತ ಬಿಗಿ ಭದ್ರತೆ ಕಲ್ಪಿಸಲಾಗಿದೆ. 10,000 ಪೊಲೀಸರು ಹಾಗೂ 1,000 ಮುಖ ಗುರುತಿಸುವಿಕೆ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ.

ಮಂಗಳವಾರದಂದು 77 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲು ರಾಷ್ಟ್ರ ರಾಜಧಾನಿ ಸಜ್ಜಾಗಿದೆ. ಪ್ರಧಾನಿ ನರೇಂದ್ರ ಮೋದಿ  ಅವರು ಆಗಸ್ಟ್ 15 ರಂದು ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಹರಿಯಾಣದ ನುಹ್ ಮತ್ತು ಅಕ್ಕಪಕ್ಕದ ಪ್ರದೇಶಗಳಲ್ಲಿ ಇತ್ತೀಚೆಗೆ ನಡೆದ ಹಿಂಸಾಚಾರವನ್ನು ಗಮನದಲ್ಲಿಟ್ಟುಕೊಂಡು ಕಟ್ಟುನಿಟ್ಟಿನ ನಿಗಾ ವಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕೆಂಪು ಕೋಟೆಯಲ್ಲಿ ಡ್ರೋನ್ ವಿರೋಧಿ ವ್ಯವಸ್ಥೆಗಳನ್ನು ಅಳವಡಿಸಲಾಗಿದೆ.

ವಾಯು ರಕ್ಷಣಾ ಗನ್ಗಳನ್ನು ಅಳವಡಿಸುವುದು ಸೇರಿದಂತೆ ಎಲ್ಲಾ ಭಯೋತ್ಪಾದನಾ ವಿರೋಧಿ ಕ್ರಮಗಳನ್ನು ಕೈಗೊಳ್ಳಲಾಗಿದೆ. ಪ್ರಧಾನ ಮಂತ್ರಿ ಮತ್ತು ಇತರ ವಿವಿಐಪಿ ಅತಿಥಿಗಳ ಭದ್ರತೆಗಾಗಿ ಸ್ನೈಪರ್ಗಳು, ಗಣ್ಯ SWAT ಕಮಾಂಡೋಗಳು ಮತ್ತು ಶಾರ್ಪ್ಶೂಟರ್ಗಳನ್ನು ಕಾರ್ಯತಂತ್ರದ ಸ್ಥಳಗಳಲ್ಲಿ ಇರಿಸಲಾಗುತ್ತದೆ.

ಭದ್ರತಾ ವ್ಯವಸ್ಥೆಗಳ ವಿವರಗಳನ್ನು ಹಂಚಿಕೊಂಡಿರುವ ಪೊಲೀಸ್ ವಿಶೇಷ ಆಯುಕ್ತ (ಕಾನೂನು ಮತ್ತು ಸುವ್ಯವಸ್ಥೆ) ದೇಪೇಂದ್ರ ಪಾಠಕ್, ಈ ವರ್ಷ COVID -19 ಯಾವುದೇ ನಿರ್ಬಂಧಗಳಿಲ್ಲದೇ ಸ್ವಾತಂತ್ರ್ಯ ದಿನಾಚರಣೆಯನ್ನು ಉತ್ಸಾಹದಿಂದ ಆಚರಿಸಲಾಗುವುದು. ಆದ್ದರಿಂದ ಹೆಚ್ಚಿನ ಭದ್ರತೆ ಕಲ್ಪಿಸಲಾಗಿದೆ ಎಂದು ತಿಳಿಸಿದ್ದಾರೆ. 

 

Share this Story:

Follow Webdunia kannada

ಮುಂದಿನ ಸುದ್ದಿ

ಪ್ರೇಮಿಯೊಂದಿಗೆ ಸರಸವಾಡಲು ಸ್ಕೆಚ್ ಹಾಕಿ ಪತಿಯನ್ನೇ ಮುಗಿಸಿದ ಪತ್ನಿ!