Select Your Language

Notifications

webdunia
webdunia
webdunia
webdunia

ಬಿಹಾರ ಚುನಾವಣಾ ಮಹಾಕದನಕ್ಕೆ ಮುಹೂರ್ತ ಫಿಕ್ಸ್: ಎರಡು ಹಂತದಲ್ಲಿ ಮತದಾನ

Bihar Assembly Elections, Central Election Commission, Commissioner Gyanesh Kumar

Sampriya

ನವದೆಹಲಿ , ಸೋಮವಾರ, 6 ಅಕ್ಟೋಬರ್ 2025 (17:42 IST)
ನವದೆಹಲಿ: ಬಿಹಾರ ವಿಧಾನಸಭೆ ಚುನಾವಣೆಗೆ ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗ ಘೋಷಿಸಿದೆ. ಇದೇ ವರ್ಷಾಂತ್ಯದಲ್ಲಿ ಎರಡು ಹಂತದಲ್ಲಿ ಮತದಾನ ನಡೆಯಲಿದೆ. 

ನವೆಂಬರ್ 6ರಂದು ಮೊದಲ ಹಂತದ ಮತದಾನ ನಡೆದರೇ ನವೆಂಬರ್ 11ಕ್ಕೆ ಎರಡನೇ ಹಂತದ ಮತದಾನ ನಡೆಯಲಿದ್ದು ನ.14ಕ್ಕೆ ಫಲಿತಾಂಶ ಹೊರಬೀಳಲಿದೆ ಎಂದು ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ಜ್ಞಾನೇಶ್ ಕುಮಾರ್ ಹೇಳಿದರು.

243 ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು ರಾಜ್ಯದಲ್ಲಿ 7.43 ಕೋಟಿ ಮತದಾರರಿದ್ದಾರೆ. ಈ ಪೈಕಿ 3.29 ಕೋಟಿ ಪುರುಷ ಮತದಾರರಿದ್ದರೆ, 3.50 ಕೋಟಿ ಮಹಿಳಾ ಮತದಾರರಿದ್ದಾರೆ. 

ಮೊದಲ ಬಾರಿಗೆ 14 ಲಕ್ಷ ಮತದಾರರು ಮತ ಚಲಾಯಿಸಲಿದ್ದಾರೆ. ನ.6ರಂದು 121 ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ಮತದಾನ ನಡೆದರೇ ನ.11ರಂದು 122 ಕ್ಷೇತ್ರಗಳಿಗೆ ಎರಡನೇ ಹಂತದ ನಡೆಯಲಿದೆ ಎಂದು ಅವರು ತಿಳಿಸಿದರು. 

Share this Story:

Follow Webdunia kannada

ಮುಂದಿನ ಸುದ್ದಿ

ಬಿಜೆಪಿ ತನ್ನ ಅಧಿಕಾರದಲ್ಲಿ ಈ ಕೆಲಸ ಮಾಡಿದ್ದರೆ ಇಂದೇ ಸಚಿವ ಸ್ಥಾನಕ್ಕೆ ರಾಜೀನಾಮೆ: ಜಮೀರ್