Webdunia - Bharat's app for daily news and videos

Install App

Tirupati Stampede: ಮೃತರ ಕುಟುಂಬಕ್ಕೆ ಪರಿಹಾರ ಘೋಷಿಸಿದ ಆಂಧ್ರ ಸರ್ಕಾರ, ಇಲ್ಲಿದೆ ಮಾಹಿತಿ

Sampriya
ಗುರುವಾರ, 9 ಜನವರಿ 2025 (16:49 IST)
Photo Courtesy X
ಆಂಧ್ರಪ್ರದೇಶ: ವೈಕುಂಠ ಏಕಾದಶಿ ಹಿನ್ನೆಲೆ ತಿರುಪತಿ ತಿಮ್ಮಪ್ಪನ ದರ್ಶನಕ್ಕಾಗಿ ಟೋಕನ್ ವಿತರಿಸುವ ಕೇಂದ್ರಗಳಲ್ಲಿ ಕಾಲ್ತುಳಿತ ಸಂಭವಿಸಿ ಸಾವನ್ನಪ್ಪಿದ್ದ ಮೃತರ ಕುಟುಂಬಕ್ಕೆ ರಾಜ್ಯ ಸರ್ಕಾರ ₹25 ಲಕ್ಷ ಪರಿಹಾರ ಘೋಷಿಸಿದೆ.

ತಿರುಪತಿ ಜಿಲ್ಲಾ ಉಸ್ತುವಾರಿ ಕಂದಾಯ ಸಚಿವ ಅನಗಣಿ ಸತ್ಯ ಪ್ರಸಾದ್ ಅವರು ತಮ್ಮ ಸಂಪುಟ ಸಹೋದ್ಯೋಗಿಗಳಾದ ವಂಗಲಪುಡಿ ಅನಿತಾ (ಗೃಹ), ಆನಂ ರಾಮನಾರಾಯಣ ರೆಡ್ಡಿ (ದತ್ತಿ), ನಿಮ್ಮಲಾ ರಾಮ ನಾಯ್ಡು (ನೀರಾವರಿ) ಮತ್ತು ಕೆ.ಪಾರ್ಥಸಾರಥಿ (ಐ & ಪಿಆರ್) ಅವರೊಂದಿಗೆ ಸ್ವಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿದರು. ರಾಜ್ಯದ ಪರವಾಗಿ ಘೋಷಣೆ ಮಾಡಿದರು.

ಮೃತರ ಸಂಬಂಧಿಕರು ಮತ್ತು ಚಿಕಿತ್ಸೆ ಪಡೆಯುತ್ತಿರುವವರ ಸಂಬಂಧಿಕರು ಆಸ್ಪತ್ರೆಯ ಆವರಣದಲ್ಲಿ ಅಳಲು ತೋಡಿಕೊಂಡರು.

ಗುರುವಾರ ತಿರುಪತಿಯ SVIMS ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳನ್ನು ಭೇಟಿ ಮಾಡಿದ ನಂತರ ಟಿಟಿಡಿ ಕಾರ್ಯನಿರ್ವಾಹಕ ಅಧಿಕಾರಿ ಜೆ.ಶ್ಯಾಮಲಾ ರಾವ್ ಅವರು ತೆರಳಿದರು.

ಅಂತೆಯೇ, ನಾರಾಯಣವನಂ ತಹಶೀಲ್ದಾರ್ ತಿರುಪತಿ ಪೂರ್ವ ಪೊಲೀಸ್ ಠಾಣೆಗೆ ಕಾಲ್ತುಳಿತದ ಬಗ್ಗೆ ದೂರು ನೀಡಿದ್ದು, ಅದರ ಆಧಾರದ ಮೇಲೆ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 194 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಹುಕೋಟಿ ಮದ್ಯ ಹಗರಣ: ಮಾಜಿ ಸಿಎಂ ಭೂಪೇಶ್ ಬಾಘೇಲ್ ಪುತ್ರ ಅರೆಸ್ಟ್‌

ಧರ್ಮಸ್ಥಳ ಪ್ರಕರಣದಲ್ಲಿ ಯಾವುದೇ ಒತ್ತಡಕ್ಕೆ ಮಣಿಯುವುದಿಲ್ಲ: ಸಿದ್ದರಾಮಯ್ಯ

ಫೇಸ್ ಬುಕ್ ನಲ್ಲಿ ಕನ್ನಡ ಅನುವಾದ ಎಡವಟ್ಟು: ಸಿಎಂ ಸಿದ್ದರಾಮಯ್ಯ ಕ್ಷಮೆ ಕೇಳಿದ ಮೆಟಾ

ನವಂಬರ್ ನಲ್ಲಿ ರಾಜ್ಯ ರಾಜಕೀಯದಲ್ಲಿ ಮಹತ್ವದ ಬದಲಾವಣೆ: ವಿಜಯೇಂದ್ರ ಸ್ಪೋಟಕ ಹೇಳಿಕೆ

ಬೈರತಿ ಬಸವರಾಜು ವಿರುದ್ಧ ಪೊಲೀಸರೇ ಹೆಸರು ಸೇರಿಸಿಕೊಂಡಿದ್ದಾರೆ: ಆರ್ ಅಶೋಕ್

ಮುಂದಿನ ಸುದ್ದಿ
Show comments