Select Your Language

Notifications

webdunia
webdunia
webdunia
webdunia

ಅಂಬೇಡ್ಕರ್ ಬದಲು ದೇವರ ಸ್ಮರಣೆ ಮಾಡಿ ಎಂದ ಅಮಿತ್ ಶಾ ವಿರುದ್ಧ ಟಿಎಂಸಿ ಹಕ್ಕುಚ್ಯುತಿ ನೋಟಿಸ್

Dr.BR Ambedkar, Central Minister Amith Shah, TMC

Sampriya

ನವದೆಹಲಿ , ಬುಧವಾರ, 18 ಡಿಸೆಂಬರ್ 2024 (18:09 IST)
Photo Courtesy X
ನವದೆಹಲಿ: ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ರಾಜ್ಯಸಭೆಯಲ್ಲಿ ತೃಣಮೂಲ ಕಾಂಗ್ರೆಸ್‌ನ ಡೆರೆಕ್ ಒಬ್ರಯಾನ್ ಅವರು ಹಕ್ಕು ಚ್ಯುತಿ ನೋಟಿಸ್ ನೀಡಿದ್ದಾರೆ.

ಅಮಿತ್ ಶಾ ಹೇಳಿಕೆ ಹಾಗೂ ಅವರು ಹೇಳಿದ ರೀತಿ ಅವಮಾನಕಾರಿಯಾಗಿತ್ತು ಎಂದು ಬುಧವಾರ ಮಧ್ಯಾಹ್ನದ ಬಳಿಕ ಹಕ್ಕುಚ್ಯುತಿ ನೋಟಿಸ್ ನೀಡಿದ್ದಾರೆ.

ಅಮಿತ್‌ ಶಾ ಹೇಳಿಕೆ ವಿರೋಧಿಸಿ ಸಂಸತ್ ಭವನದ ಬಳಿ ಬುಧವಾರ ಬೆಳಿಗ್ಗೆ ಕಾಂಗ್ರೆಸ್ ನೇತೃತ್ವದ ಪ್ರತಿಭಟನೆಗೆ ಟಿಎಂಸಿ ಗೈರಾಗಿತ್ತು.
ಅಮಿತ್ ಶಾ ಹೇಳಿಕೆ ಖಂಡಿಸಿ, ರಾಜ್ಯಸಭೆಯಲ್ಲಿ ಮಧ್ಯಾಹ್ನ ಶಾ ವಿರುದ್ಧ ಘೋಷಣೆ ಕೂಗಿ ಸಭಾತ್ಯಾಗ ಮಾಡಿತ್ತು.

ಏನಿದು ಆರೋಪ:
ಮಂಗಳವಾರ ರಾಜ್ಯಸಭೆಯಲ್ಲಿ ಮಾತನಾಡಿದ್ದ ಅಮಿತ್ ಶಾ ಅವರು, 'ಅಂಬೇಡ್ಕರ್, ಅಂಬೇಡ್ಕರ್... ಎಂದು ಹೇಳುವುದು ಇದೀಗ ಫ್ಯಾಷನ್ ಆಗಿಬಿಟ್ಟಿದೆ. ಅಂಬೇಡ್ಕರ್ ಬದಲು ದೇವರ ನಾಮಸ್ಮರಣೆ ಮಾಡಿದ್ದರೆ, ಸ್ವರ್ಗದಲ್ಲಿ ಸ್ಥಾನ ಸಿಗುತ್ತಿತ್ತು' ಎಂದು ಹೇಳಿದ್ದರು.

Share this Story:

Follow Webdunia kannada

ಮುಂದಿನ ಸುದ್ದಿ

ಮುಂಬೈ: ರೈಲಿನ ಲೇಡಿಸ್ ಕೋಚ್‌ಗೆ ಬೆತ್ತಲೆಯಾಗಿ ಬಂದು ಭಯ ಹುಟ್ಟಿಸಿದ ವ್ಯಕ್ತಿ