ಬಿಜೆಪಿಗೆ ಸೇರ್ಪಡೆಯಾದ ಟಿಎಂಸಿ ಸಂಸದ ಸೌಮಿತ್ರ ಖಾನ್

ಗುರುವಾರ, 10 ಜನವರಿ 2019 (09:17 IST)
ಕೋಲ್ಕತ್ತಾ : ಲೋಕಸಭಾ ಚುನಾವಣೆಗೆ ಪಕ್ಷಗಳು ಭರ್ಜರಿ ಸಿದ್ಧತೆ ಮಾಡಿಕೊಳ್ಳುತ್ತಿದ್ದು, ಈ ಬೆನ್ನಲೇ ಇದೀಗ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರಿಗೆ  ಟಿಎಂಸಿ ಸಂಸದರೊಬ್ಬರು ಬಿಗ್ ಶಾಕ್ ನೀಡಿದ್ದಾರೆ.


ಪಶ್ಚಿಮ ಬಂಗಾಳದ ಬಿಷ್ಣುಪುರ್ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾದ ಟಿಎಂಸಿ ಸದಸ್ಯ ಸೌಮಿತ್ರ ಖಾನ್ ಬುಧವಾರ  ದೆಹಲಿಯ ಬಿಜೆಪಿ ಮುಖ್ಯ ಕಚೇರಿಯಲ್ಲಿ ಅಧಿಕೃತವಾಗಿ ಪಕ್ಷ ಸೇರಿದ್ದಾರೆ. ಈ ವೇಳೆ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಹಾಗೂ ಪಶ್ಚಿಮ ಬಂಗಾಳದ ಬಿಜೆಪಿ ಮುಖಂಡ ಮುಖಲ್ ರಾಯ್ ಹಾಜರಿದ್ದರು.


ಬಿಜೆಪಿಗೆ ಸೇರ್ಪಡೆಗೊಂಡ ಬಳಿಕ ಮಾತನಾಡಿದ ಸೌಮಿತ್ರ ಖಾನ್ ಅವರು, ಪಶ್ಚಿಮ ಬಂಗಾಳದಲ್ಲಿ ಸಿಂಡಿಕೇಟ್ ರಾಜ್ ಮತ್ತು ಪೊಲೀಸ್ ರಾಜ್ ಪರಿಸ್ಥಿತಿ ನಿರ್ಮಾಣವಾಗಿದೆ. ಕಾನೂನು ಸುವ್ಯವಸ್ಥೆ ಹದಗೆಡುತ್ತಿದ್ದು, ತೃಣಮೂಲ ಕಾಂಗ್ರೆಸ್ ಗೂಂಡಾಗಳಿಗೆ ಬೆಂಬಲ ನೀಡುತ್ತಿದೆ. ರಾಜ್ಯದಲ್ಲಿ ಅಹಿತಕರ ಘಟನೆಗಳು ಹೆಚ್ಚಾಗುತ್ತಿವೆ. ಹೀಗಾಗಿ ನಾನು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬೆಂಬಲ ನೀಡಿ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರಲು ಶ್ರಮಿಸುತ್ತೇನೆ ಎಂದು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಮುಂದಿನ ಸುದ್ದಿ ಪ್ರಧಾನಮಂತ್ರಿಗೆ ಅಭಿನಂದನೆ ಸಲ್ಲಿಸಿದ ಸಚಿವ ಆರ್. ವಿ.ದೇಶಪಾಂಡೆ