Daily Horoscope
✕

ಬಿಜೆಪಿಗೆ ಸೇರ್ಪಡೆಯಾದ ಟಿಎಂಸಿ ಸಂಸದ ಸೌಮಿತ್ರ ಖಾನ್

Webdunia
ಗುರುವಾರ, 10 ಜನವರಿ 2019 (09:17 IST)
ಕೋಲ್ಕತ್ತಾ : ಲೋಕಸಭಾ ಚುನಾವಣೆಗೆ ಪಕ್ಷಗಳು ಭರ್ಜರಿ ಸಿದ್ಧತೆ ಮಾಡಿಕೊಳ್ಳುತ್ತಿದ್ದು, ಈ ಬೆನ್ನಲೇ ಇದೀಗ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರಿಗೆ  ಟಿಎಂಸಿ ಸಂಸದರೊಬ್ಬರು ಬಿಗ್ ಶಾಕ್ ನೀಡಿದ್ದಾರೆ.


ಪಶ್ಚಿಮ ಬಂಗಾಳದ ಬಿಷ್ಣುಪುರ್ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾದ ಟಿಎಂಸಿ ಸದಸ್ಯ ಸೌಮಿತ್ರ ಖಾನ್ ಬುಧವಾರ  ದೆಹಲಿಯ ಬಿಜೆಪಿ ಮುಖ್ಯ ಕಚೇರಿಯಲ್ಲಿ ಅಧಿಕೃತವಾಗಿ ಪಕ್ಷ ಸೇರಿದ್ದಾರೆ. ಈ ವೇಳೆ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಹಾಗೂ ಪಶ್ಚಿಮ ಬಂಗಾಳದ ಬಿಜೆಪಿ ಮುಖಂಡ ಮುಖಲ್ ರಾಯ್ ಹಾಜರಿದ್ದರು.


ಬಿಜೆಪಿಗೆ ಸೇರ್ಪಡೆಗೊಂಡ ಬಳಿಕ ಮಾತನಾಡಿದ ಸೌಮಿತ್ರ ಖಾನ್ ಅವರು, ಪಶ್ಚಿಮ ಬಂಗಾಳದಲ್ಲಿ ಸಿಂಡಿಕೇಟ್ ರಾಜ್ ಮತ್ತು ಪೊಲೀಸ್ ರಾಜ್ ಪರಿಸ್ಥಿತಿ ನಿರ್ಮಾಣವಾಗಿದೆ. ಕಾನೂನು ಸುವ್ಯವಸ್ಥೆ ಹದಗೆಡುತ್ತಿದ್ದು, ತೃಣಮೂಲ ಕಾಂಗ್ರೆಸ್ ಗೂಂಡಾಗಳಿಗೆ ಬೆಂಬಲ ನೀಡುತ್ತಿದೆ. ರಾಜ್ಯದಲ್ಲಿ ಅಹಿತಕರ ಘಟನೆಗಳು ಹೆಚ್ಚಾಗುತ್ತಿವೆ. ಹೀಗಾಗಿ ನಾನು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬೆಂಬಲ ನೀಡಿ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರಲು ಶ್ರಮಿಸುತ್ತೇನೆ ಎಂದು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ಮ ರಿಟರ್ನ್ಸ್…ಭಾರತೀಯ ಯೋಧನಿಗೇ ದಂಡ ಹಾಕಿ ಶೈನ್ ಆಗಲು ಹೊರಟ ಮಹಿಳಾ ಅಧಿಕಾರಿ: ಕೊನೆಗೆ ಆಗಿದ್ದೇ ಬೇರೆ video

ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿ ಬಂದಿದ್ದಕ್ಕೆ ನೌಕರನಿಗೆ ಇದೆಂಥಾ ಅನ್ಯಾಯ: ಖಾಸಗಿ ಸಂಸ್ಥೆ ವಿರುದ್ಧ ಭಾರೀ ಆಕ್ರೋಶ video

ರಾಜಿ ಮಾಡಿಕೊಂಡ ಪ್ರಧಾನಿ ಆ ಮೇಜಿನ ಬಳಿ ಕೂರಲು ಸಾಧ್ಯವಿಲ್ಲ ಎಂದ ರಾಹುಲ್ ಗಾಂಧಿ; ಸೋನಿಯಾ, ಮನಮೋಹನ್ ಹಳೇ ಫೋಟೋ ಹಾಕಿ ಹೀಗಾ ಎಂದ ನೆಟ್ಟಿಗರು

ಮಹಿಳೆಯ ಅನುಮಾನಾಸ್ಪದ ಸಾವು: ಗಂಡನ ಮನೆ ಗೇಟ್ ಮುಂದೆಯೇ ಶವಕ್ಕೆ ಬೆಂಕಿಯಿಟ್ರು Video

Karnataka Weather: ಬೆಂಗಳೂರು ಸೇರಿದಂತೆ ಉತ್ತರ ಕರ್ನಾಟಕದಲ್ಲಿ ಹೆಚ್ಚಾಗಲಿದೆ ಚಳಿ

ಮುಂದಿನ ಸುದ್ದಿ
Show comments