Webdunia - Bharat's app for daily news and videos

Install App

ಎಸ್​ಬಿಐ ಗ್ರಾಹಕರ ಗಮನಕ್ಕೆ

Webdunia
ಶುಕ್ರವಾರ, 10 ಡಿಸೆಂಬರ್ 2021 (14:25 IST)
ಭಾರತದ ಅತಿದೊಡ್ಡ ಬ್ಯಾಂಕ್ ಆದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಗ್ರಾಹಕರು ನಾಳೆ (ಡಿಸೆಂಬರ್ 11, 2021) ನಿರ್ದಿಷ್ಟ ಅವಧಿಯವರೆಗೆ ಇಂಟರ್ನೆಟ್ ಬ್ಯಾಂಕಿಂಗ್ ಸೇವೆಗಳನ್ನು ಬಳಸಲು ಸಾಧ್ಯ ಆಗುವುದಿಲ್ಲ.
ನಿಗದಿತ ನಿರ್ವಹಣೆ ಚಟುವಟಿಕೆಗಳಿಂದಾಗಿ ಶನಿವಾರ ಮತ್ತು ಭಾನುವಾರದಂದು ಎಸ್ಬಿಐ ಇಂಟರ್ನೆಟ್ ಬ್ಯಾಂಕಿಂಗ್ ಸೇವೆಗಳ ಬಳಕೆದಾರರು ಒಟ್ಟು 300 ನಿಮಿಷಗಳ ಕಾಲ ಇಂಟರ್ನೆಟ್ ಬ್ಯಾಂಕಿಂಗ್, YONO, YONO ಲೈಟ್, ಯುಪಿಐನಂತಹ ವಿವಿಧ ವೈಶಿಷ್ಟ್ಯಗಳನ್ನು ಬಳಸಲು ಸಾಧ್ಯ ಆಗುವುದಿಲ್ಲ.

ಎಸ್‌ಬಿಐ ತನ್ನ ಅಧಿಕೃತ ಟ್ವಿಟರ್ ಹ್ಯಾಂಡಲ್ ಮೂಲಕ ಟ್ವೀಟ್ ಮಾಡಿದ್ದು, “ನಾವು ಉತ್ತಮ ಬ್ಯಾಂಕಿಂಗ್ ಅನುಭವವನ್ನು ಒದಗಿಸಲು ಪ್ರಯತ್ನಿಸುತ್ತಿರುವಾಗ ನಮ್ಮ ಗೌರವಾನ್ವಿತ ಗ್ರಾಹಕರು ನಮ್ಮೊಂದಿಗೆ ಸಹಿಸಿಕೊಳ್ಳಬೇಕೆಂದು ವಿನಂತಿಸುತ್ತೇವೆ.”

“ನಾವು 11ನೇ ಡಿಸೆಂಬರ್ 2021ರಂದು 23.30ರಿಂದ 4.30ರ ವರೆಗೆ (300 ನಿಮಿಷಗಳು) ತಂತ್ರಜ್ಞಾನವನ್ನು ಅಪ್‌ಗ್ರೇಡ್ ಮಾಡಲಿದ್ದೇವೆ. ಈ ಅವಧಿಯಲ್ಲಿ, INB/ Yono / Yono Lite / Yono Business / UPI ಲಭ್ಯ ಇರುವುದಿಲ್ಲ. ಅನನುಕೂಲತೆಗೆ ನಾವು ವಿಷಾದಿಸುತ್ತೇವೆ ಮತ್ತು ನಮ್ಮೊಂದಿಗೆ ಸಹಿಸಿಕೊಳ್ಳುವಂತೆ ವಿನಂತಿಸುತ್ತೇವೆ.” ಎಂದು ತಿಳಿಸಿದೆ.

”ನಾವು ಉತ್ತಮ ಬ್ಯಾಂಕಿಂಗ್ ಅನುಭವವನ್ನು ಒದಗಿಸಲು ಪ್ರಯತ್ನಿಸುತ್ತಿರುವಾಗ ಗೌರವಾನ್ವಿತ ಗ್ರಾಹಕರು ನಮ್ಮೊಂದಿಗೆ ಇರುವಂತೆ ವಿನಂತಿಸುತ್ತೇವೆ,” ಎಂದು ಅದು ಹೇಳಿದೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾವು ದೇಶದಾದ್ಯಂತ 22,000ಕ್ಕೂ ಹೆಚ್ಚು ಶಾಖೆಗಳನ್ನು ಮತ್ತು 57,889ಕ್ಕೂ ಹೆಚ್ಚು ಎಟಿಎಂಗಳೊಂದಿಗೆ ದೊಡ್ಡ ಜಾಲವನ್ನು ಹೊಂದಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments