Select Your Language

Notifications

webdunia
webdunia
webdunia
webdunia

ಇಂದು ರಾಹುಲ್ ಗಾಂಧಿಗೆ ಪಟ್ಟಾಭಿಷೇಕ

ಇಂದು ರಾಹುಲ್ ಗಾಂಧಿಗೆ ಪಟ್ಟಾಭಿಷೇಕ
ನವದೆಹಲಿ , ಶನಿವಾರ, 16 ಡಿಸೆಂಬರ್ 2017 (08:18 IST)
ದೆಹಲಿ: ರಾಹುಲ್ ಗಾಂಧಿ ಅವರನ್ನು ಎಐಸಿಸಿ ಅಧ್ಯಕ್ಷ ಸ್ಥಾನಕ್ಕೇರಿಸುವ ಕಾರ್ಯಕ್ರಮ ನಡೆಯಲಿದ್ದು, ಈಗಾಗಲೇ ಅಧ್ಯಕ್ಷ ಸ್ಥಾನದಲ್ಲಿರುವ ಸೋನಿಯಾ ಗಾಂಧಿ ಅವರು ತಮ್ಮ ಅಧಿಕಾರವನ್ನು ತಮ್ಮ ಮಗನಾದ ರಾಹುಲ್ ಗಾಂಧಿ ಅವರಿಗೆ ಹಸ್ತಾಂತರಿಸಲಿದ್ದಾರೆ.


ಈ ಕಾರ್ಯಕ್ರಮ ಇಂದು ದೆಹಲಿಯ ಎಐಸಿಸಿ ಕಚೇರಿಯಲ್ಲಿ ನಡೆಯಲಿದ್ದು, ಕಾರ್ಯಕ್ರಮದಲ್ಲಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಹಾಗೂ ಮಾಜಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಹಾಗೂ,ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಭಾಗಿಯಾಗಿರುತ್ತಾರೆ.


ಈ ಸಮಾರಂಭಕ್ಕೆ ರಾಜ್ಯ ಕಾಂಗ್ರೆಸ್ ನಾಯಕರು ಪಾಲ್ಗೊಳ್ಳುವ ಸಾಧ್ಯತೆ ಕೂಡ ಇದೆ. ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಹುಲ್ ಗಾಂಧಿ ಅವರು ಪಟ್ಟಕ್ಕೇರುತ್ತಿರುವುದನ್ನು ಕೇಳಿ  ಕಾಂಗ್ರೆಸ್ ಕಾರ್ಯಕರ್ತರು ಸಂತೋಷಗೊಂಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಆರುಷಿ ಕೊಲೆ ಪ್ರಕರಣದಲ್ಲಿ ಸುಪ್ರೀಂ ಮೆಟ್ಟಿಲೇರಿದ ಹೇಮರಾಜ್ ಪತ್ನಿ