Select Your Language

Notifications

webdunia
webdunia
webdunia
webdunia

ಇಂದು ಯೋಗಿ ಆದಿತ್ಯನಾಥ್ ಪ್ರಮಾಣ ಸ್ವೀಕಾರ

ಇಂದು ಯೋಗಿ ಆದಿತ್ಯನಾಥ್ ಪ್ರಮಾಣ ಸ್ವೀಕಾರ
ಲಕ್ನೋ , ಶುಕ್ರವಾರ, 25 ಮಾರ್ಚ್ 2022 (12:05 IST)
ಲಖನೌ : ಉತ್ತರ ಪ್ರದೇಶದಲ್ಲಿ ದಾಖಲೆಯ 2ನೇ ಅವಧಿಗೆ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿರುವ ಯೋಗಿ ಆದಿತ್ಯನಾಥ್, 
 
ಅವರ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ಮಾ.25ರಂದು ಸಂಜೆ 4 ಗಂಟೆಗೆ ಲಖನೌನಲ್ಲಿರುವ ಅಟಲ್ ಬಿಹಾರಿ ವಾಜಪೇಯಿ ಇಕಾನಾ ಸ್ಟೇಡಿಯಂನಲ್ಲಿ ನಡೆಯಲಿದ್ದು, ಅದ್ಧೂರಿ ಕಾರ್ಯಕ್ರಮಕ್ಕೆ ವೇದಿಕೆ ಸಿದ್ಧವಾಗಿದೆ.

ಮುಂದಿನ ಲೋಕಸಭಾ ಚುನಾವಣೆಯ ದಿಕ್ಸೂಚಿ ಎಂದೇ ಪರಿಗಣಿತವಾಗಿದ್ದ ಉತ್ತರ ಪ್ರದೇಶದಲ್ಲಿ ಬಿಜೆಪಿ ಅಭೂತಪೂರ್ವ ಜಯಗಳಿಸುವ ಮೂಲಕ ಎರಡನೇ ಬಾರಿಗೆ ಅಧಿಕಾರಕ್ಕೆ ಏರಿದೆ.

ಒಟ್ಟು 403 ಕ್ಷೇತ್ರಗಳ ಪೈಕಿ 273 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸುವ 37 ವರ್ಷಗಳ ರಾಜ್ಯದ ಇತಿಹಾಸದಲ್ಲಿ ಸತತ ಎರಡನೇ ಅವಧಿಗೆ ಅಧಿಕಾರಕ್ಕೆ ಬಂದ ಮೊದಲ ಆಡಳಿತಾರೂಢ ಪಕ್ಷ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಕುಡಿದು ಜಗಳವಾಡಿ ಪೊಲೀಸರಿಗೆ ಸಿಕ್ಕಿಬಿದ್ದ ಅತ್ಯಾಚಾರ ಆರೋಪಿಗಳು