Select Your Language

Notifications

webdunia
webdunia
webdunia
webdunia

ನಾಳೆ ಕಾಂಗ್ರೆಸ್ ಮಹತ್ವದ ಸುದ್ದಿಗೋಷ್ಠಿ

ನಾಳೆ ಕಾಂಗ್ರೆಸ್ ಮಹತ್ವದ ಸುದ್ದಿಗೋಷ್ಠಿ
ನವದೆಹಲಿ , ಭಾನುವಾರ, 12 ಜೂನ್ 2022 (11:49 IST)
ನವದೆಹಲಿ : ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಸಂಸದ ರಾಹುಲ್ ಗಾಂಧಿಗೆ ಇಡಿ ಸಮನ್ಸ್ ನೀಡಿದ್ದು,
 
ಈ ಸಂಬಂಧ ನಾಳೆ ದೇಶದ್ಯಾಂತ ಎಲ್ಲ ರಾಜ್ಯಗಳ ಪ್ರಮುಖ ನಗರಗಳಲ್ಲಿ ಸುದ್ದಿಗೋಷ್ಠಿ ನಡೆಸಲು ತೀರ್ಮಾನಿಸಲಾಗಿದೆ.

ಕೇಂದ್ರ ಸರ್ಕಾರದ ಕೈಗೊಂಬೆಯಾಗಿ ಇಡಿ ವರ್ತಿಸುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ಬೃಹತ್ ಪ್ರತಿಭಟನಾ ರ್ಯಾಲಿ ಹಮ್ಮಿಕೊಳ್ಳಲು ನಿರ್ಧರಿಸಿದೆ. ಜೂನ್ 13 ರಂದು ದೆಹಲಿಯಲ್ಲಿ ಈ ಪ್ರತಿಭಟನೆ ನಡೆಯಲಿದ್ದು ಎಐಸಿಸಿ ಕಚೇರಿಯಿಂದ ಇಡಿ ಕಚೇರಿವರೆಗೂ ಕಾಂಗ್ರೆಸ್ ನಾಯಕರು ಪಾದಯಾತ್ರೆ ಮಾಡಲಿದ್ದಾರೆ.

ಮೂಲಗಳ ಪ್ರಕಾರ ಜೂನ್ 13ರ ಕಾರ್ಯಕ್ರಮದ ಬಗ್ಗೆ ನಾಳಿನ ಸುದ್ದಿಗೋಷ್ಠಿಯಲ್ಲಿ ರಾಜ್ಯ ಕಾಂಗ್ರೆಸ್ ನಾಯಕರು ಸುದ್ದಿಗೋಷ್ಠಿ ನಡೆಸಲಿದ್ದು, ಕೇಂದ್ರ ಸರ್ಕಾರ ಮತ್ತು ಜಾರಿ ನಿರ್ದೇಶನಾಲಯ ವಿರುದ್ಧ ವಾಗ್ದಾಳಿ ನಡೆಸಲಿದ್ದಾರೆ ಎನ್ನಲಾಗಿದೆ.

 

Share this Story:

Follow Webdunia kannada

ಮುಂದಿನ ಸುದ್ದಿ

ವಿವಾದ : ಇಂದು ಬೃಹತ್ ಸಮಾವೇಶ!