ತಿರುವನಂತಪುರಂ : ಪರಿಶಿಷ್ಟ ಜಾತಿಗೆ ಸೇರಿದವಳು ಎಂದು ತಿಳಿದು ಆಕೆಯ ದೇಹವನ್ನು ಮುಟ್ಟುತ್ತಾನೆ ಎಂಬುದು ನಂಬಲಾಗದ ಸಂಗತಿ ಎಂದು ಕೋಯಿಕ್ಕೋಡ್ ಜಿಲ್ಲಾ ಸೆಷನ್ಸ್ ನ್ಯಾಯಾಲಯ ಹೇಳಿದೆ.
ಬರಹಗಾರ, ಸಾಮಾಜಿಕ ಕಾರ್ಯಕರ್ತ ಸಿವಿಕ್ ಚಂದ್ರನ್ ಅವರ ಮೇಲೆ 30 ವರ್ಷ ವಯಸ್ಸಿನ ಮಹಿಳೆಯೊಬ್ಬರು ಲೈಂಗಿಕ ಕಿರುಕುಳ ಮೊಕದ್ದಮೆ ದಾಖಲಿಸಿದ್ದರು.
ಪ್ರಕರಣ ವಿಚಾರಣೆ ನಡೆಸಿದ್ದ ಕೋರ್ಟ್, ಐಪಿಸಿ ಸೆಕ್ಷನ್ 354ಎ (ಒತ್ತಾಯಪೂರ್ವಕ ಲೈಂಗಿಕ ದೌರ್ಜನ್ಯ) ಅಡಿ ಆರೋಪಿಯ ಅಪರಾಧವು ಮೇಲ್ನೋಟಕ್ಕೆ ಸಾಬೀತಾಗಿಲ್ಲ ಎಂದು ಹೇಳಿದೆ.
ಸಂತ್ರಸ್ತೆಯು ಎಸ್ಸಿ/ಎಸ್ಟಿಗೆ ಸೇರಿದವಳು ಎಂಬ ಅರಿವಿದ್ದೇ ಹೀಗೆ ಲೈಂಗಿಕ ಕಿರುಕುಳ ನೀಡಲಾಗಿದೆ ಎಂಬುದನ್ನು ಸಾಬೀತುಪಡಿಸಬೇಕು ಎಂದು ಕೋರ್ಟ್ ತಿಳಿಸಿದೆ.