Publish Date: Wed, 26 Aug 2026 (18:27 IST)
Updated Date: Wed, 26 Aug 2026 (18:31 IST)
ನವದೆಹಲಿ: ಯಶ್ ಅಭಿನಯದ 'ಟಾಕ್ಸಿಕ್' ಇಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದೆ ಮತ್ತು ಇಲ್ಲಿಯವರೆಗೆ ಬಂದಿರುವ ವಿಮರ್ಶೆಗಳು ಕೆಲವೊಂದು ಉತ್ತಮವಾಗಿದ್ದಾರೆ, ಹಲವರು ನಕಾರಾತ್ಮಕವಾಗಿದೆ ಎಂದು ಹೇಳಿದ್ದಾರೆ.
ಈ ನಡುವೆ ಕಾಂತಾರ ಚೆಲುವೆ ರುಕ್ಮಿಣಿ ವಸಂತ್ ಅವರ ಬೋಲ್ಡ್ ಲುಕ್ ಕೆಲವರು ಬೇಸರ ವ್ಯಕ್ತಪಡಿಸಿದ್ದಾರೆ.
ಒಬ್ಬ ಬಳಕೆದಾರರು ಹೀಗೆ ಬರೆದಿದ್ದಾರೆ: "ಇಂತಹ ದೃಶ್ಯಗಳನ್ನು ನಾನು ಹೇಗೆ ಸ್ವೀಕರಿಸಲಿ? ರುಕ್ಮಿಣಿ, ನಿಮ್ಮಿಂದ ಇದನ್ನು ನಾನು ನಿಜವಾಗಿಯೂ ನಿರೀಕ್ಷಿಸಿರಲಿಲ್ಲ!"
ಯಶ್ ಅವರ ಬಹುನಿರೀಕ್ಷಿತ ಚಿತ್ರ 'ಟಾಕ್ಸಿಕ್: ಎ ಫೇರಿಟೇಲ್ ಫಾರ್ ಗ್ರೋನ್-ಅಪ್ಸ್' (Toxic: A Fairytale for Grown-Ups) ಅಂತಿಮವಾಗಿ ಚಿತ್ರಮಂದಿರಗಳಿಗೆ ಬಂದಿದೆ.
2022ರ 'ಕೆಜಿಎಫ್: ಚಾಪ್ಟರ್ 2' ನಂತರ ಯಶ್ ಅವರು ಮತ್ತೆ ಬೆಳ್ಳಿಪರದೆಯ ಮೇಲೆ ಕಾಣಿಸಿಕೊಳ್ಳುತ್ತಿದ್ದು, ಈ ಚಿತ್ರವು ಆಗಸ್ಟ್ 26 ರಂದು ವಿಶ್ವಾದ್ಯಂತ ಬಿಡುಗಡೆಯಾಗಿದೆ.
ಗೀತು ಮೋಹನ್‌ದಾಸ್ ನಿರ್ದೇಶನದ ಈ ಚಿತ್ರವು, ಗೋವಾ ಇನ್ನೂ ಪೋರ್ಚುಗೀಸರ ಆಳ್ವಿಕೆಯಲ್ಲಿದ್ದ ಕಾಲಘಟ್ಟದ ಹಿನ್ನೆಲೆಯಲ್ಲಿ ನಡೆಯುವ 'ಪಿರಿಯಡ್ ಗ್ಯಾಂಗ್‌ಸ್ಟರ್ ಆಕ್ಷನ್ ಡ್ರಾಮಾ' ಆಗಿದೆ. ಇದರಲ್ಲಿ ಯಶ್ ದ್ವಿಪಾತ್ರದಲ್ಲಿ ನಟಿಸಿದ್ದು, ಕಿಯಾರಾ ಅಡ್ವಾಣಿ, ನಯನತಾರಾ, ಹುಮಾ ಖುರೇಷಿ, ತಾರಾ ಸುತಾರಿಯಾ ಮತ್ತು ರುಕ್ಮಿಣಿ ವಸಂತ್ ಕೂಡ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.
About Writer
ಸಂಪ್ರಿಯ
ಕನ್ನಡ ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷದಲ್ಲಿ ಬೇರೆ ಬೇರೆ ಸಂಸ್ಥೆಗಳಲ್ಲಿ ರಿಪೋರ್ಟರ್ ಆಗಿ, ಸಬ್ ಎಡಿಟರ್ ಆಗಿ, ಇದೀಗ ಕಂಟೆಂಟ್ ರೈಟರ್ ಆಗಿ ವೆಬ್ದುನಿಯಾದಲ್ಲಿ ಕೆಲಸ. ಆಳ್ವಾಸ್ ಕಾಲೇಜಿನಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋಧ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು 2016ನೇ ಸಾಲಿನಲ್ಲಿ ಪಡೆದಿರುತ್ತೇನೆ. ಮನರಂಜನೆ, ಲೈಫ್ಸ್ಟೈಲ್, ರಾಜಕೀಯ ಸುದ್ದಿಗಳ ಬಗ್ಗೆ ವಿಶೇಷ ಆಸಕ್ತಿ. ....
ಮತ್ತಷ್ಟು ಓದಿ