Select Your Language

Notifications

webdunia
webdunia
webdunia
webdunia

ಇಂಟರ್‌ಲಾಕ್ ಸಿಸ್ಟಮ್ ಸಮಸ್ಯೆಯಿಂದ ರೈಲು ಅಪಘಾತ ಸಂಭವಿಸಿದೆ : ಸಚಿವ ಅಶ್ವಿನಿ ವೈಷ್ಣವ್

ಇಂಟರ್‌ಲಾಕ್ ಸಿಸ್ಟಮ್ ಸಮಸ್ಯೆಯಿಂದ ರೈಲು ಅಪಘಾತ ಸಂಭವಿಸಿದೆ : ಸಚಿವ ಅಶ್ವಿನಿ ವೈಷ್ಣವ್
ನವದೆಹಲಿ , ಸೋಮವಾರ, 5 ಜೂನ್ 2023 (13:11 IST)
ನವದೆಹಲಿ : ಒಡಿಶಾ ರೈಲು ದುರಂತದ ಪ್ರಾಥಮಿಕ ತನಿಖೆಯನ್ನು ಅಧಿಕಾರಿಗಳು ಪೂರೈಸಿದ್ದು, ವರದಿ ನೀಡಿದ್ದಾರೆ. ಇಂಟರ್ಲಾಕ್ ಸಿಸ್ಟಮ್ ಸಮಸ್ಯೆಯಿಂದಾಗಿ ಒಡಿಶಾ ರೈಲು ಅಪಘಾತ ಸಂಭವಿಸಿದೆ ಎಂದು ಅಧಿಕಾರಿಗಳು ವರದಿಯಲ್ಲಿ ಉಲ್ಲೇಖಿಸಿದ್ದಾರೆ ಎಂದು ಕೇಂದ್ರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ.
 
ಈ ಬಗ್ಗೆ ಕಿರಿಯ ಅಧಿಕಾರಿಗಳು ಫೆಬ್ರವರಿ 9 ರಂದು ಮೇಲಾಧಿಕಾರಿಗಳ ಗಮನಕ್ಕೆ ತಂದಿದ್ದರು. ಆದರೆ ಅಧಿಕಾರಿಗಳು ಈ ಬಗ್ಗೆ ಗಮನಹರಿಸಿರಲಿಲ್ಲ. ಇದರಿಂದಾಗಿ ತೊಂದರೆ ಸಂಭವಿಸಿರುವ ಸಾಧ್ಯತೆಗಳ ಬಗ್ಗೆ ಪ್ರಾಥಮಿಕ ವರದಿಯಲ್ಲಿ ಉಲ್ಲೇಖಿಸಲಾಗಿದೆ ಎಂದು ಅವರು ಹೇಳಿದ್ದಾರೆ. 

ಅಪಘಾತ ಸ್ಥಳದಿಂದ ಎಲ್ಲಾ ಮೃತದೇಹಗಳನ್ನು ತೆಗೆದುಹಾಕಲಾಗಿದೆ. ಬುಧವಾರ ಬೆಳಿಗ್ಗೆಯಿಂದ ರೈಲು ಸಂಚಾರ ಆರಂಭಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಕೋರಮಂಡಲ್ ಎಕ್ಸ್ಪ್ರೆಸ್, ಬೆಂಗಳೂರು-ಹೌರಾ ಸೂಪರ್ಫಾಸ್ಟ್ ಎಕ್ಸ್ಪ್ರೆಸ್ ಮತ್ತು ಗೂಡ್ಸ್ ರೈಲು ನಡುವಿನ ಭೀಕರ ಅಪಘಾತದಲ್ಲಿ ಕನಿಷ್ಠ 288 ಜನರು ಸಾವನ್ನಪ್ಪಿದ್ದರು. ದೇಶದ ಅತ್ಯಂತ ಭೀಕರ ರೈಲು ದುರಂತಗಳಲ್ಲಿ ಇದು ಒಂದಾಗಿದೆ. ಅಪಘಾತದಲ್ಲಿ 900 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಅವರಲ್ಲಿ ಹೆಚ್ಚಿನವರನ್ನು ಬಾಲಸೋರ್ನ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಒಡಿಶಾದಲ್ಲಿ ಹಳಿ ತಪ್ಪಿದ ಮತ್ತೊಂದು ರೈಲು!