Publish Date: Thu, 16 Jun 2022 (14:47 IST)
Updated Date: Thu, 16 Jun 2022 (14:48 IST)
ಕೇಂದ್ರ ಸರಕಾರ ಭಾರತೀಯ ಸೇನೆಯಲ್ಲಿ ಸೇನೆಗೆ ನೇಮಕಾತಿ ಮಾಡಿಕೊಳ್ಳುವ ಅಗ್ನಿಪಥ್ ಯೋಜನೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, ಬಿಹಾರದಲ್ಲಿ ನಡೆಯುತ್ತಿರುವ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, ಕಲ್ಲು ತೂರಾಟ ಹಾಗೂ ರೈಲಿಗೆ ಬೆಂಕಿ ಹಚ್ಚಿದ ಘಟನೆಗಳು ನಡೆದಿವೆ.
ಬಿಹಾರ ಮತ್ತು ರಾಜಸ್ಥಾನದಲ್ಲಿ ಅಗ್ನಿಪಥ್ ನೇಮಕಾತಿ ಯೋಜನೆಗೆ ಭಾರೀ ವಿರೋಧ ವ್ಯಕ್ತವಾಗಿದ್ದು, ಪ್ರತಿಭಟನೆಗಳು ನಡೆಯುತ್ತಿವೆ. ಬಿಹಾರದಲ್ಲಿ ಹಲವಾರು ವಿದ್ಯಾರ್ಥಿಗಳು ರಸ್ತೆಗಿಳಿದು ಭಾರೀ ಪ್ರತಿಭಟನೆ ನಡೆಸುತ್ತಿದ್ದಾರೆ.
ಗುರುವಾರ ಬೆಳಿಗ್ಗೆ ಸಾವಿರಾರು ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದು, ಕಲ್ಲು ತೂರಾಟ ನಡೆಸಿದ್ದಾರೆ. ಬಿಹಾರದ ರೈಲ್ವೆ ನಿಲ್ದಾಣಕ್ಕೆ ನುಗ್ಗಿದ ಪ್ರತಿಭಟನಕಾರರು ರೈಲಿಗೆ ಬೆಂಕಿ ಹಚ್ಚಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.